ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಒಮ್ಮತದಿಂದ ಒಪ್ಪಿಗೆ ಸೂಚಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆದಿದ್ದು, ಈ ಸಂದರ್ಭದಲ್ಲಿ ಮೊದಲ ಹಂತದಲ್ಲಿ ರಾಜ್ಯದ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಪೂರ್ವ ತರಗತಿಗಳ ಆರಂಭ, ಮೂಲಸೌಕರ್ಯ, ಅನುಭವಿ ಶಿಕ್ಷಕರ ಕೊರತೆ ಮೊದಲಾದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಮಾಹಿತಿ ನೀಡಿದೆ.
ಈ ಸಮಸ್ಯೆಗಳ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದ 276 ಶಾಲೆಗಳಲ್ಲಿ ಈ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಹಂತಗಳಲ್ಲಿ ರಾಜ್ಯದೆಲ್ಲೆಡೆ ಇರುವ ಸರ್ಕಾರಿ ಶಾಲೆಗಳಲ್ಲಿ ಪೂರ್ವ ತರಗತಿಗಳ ಆರಂಭಕ್ಕೆ ಬೇಕಾದ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮಾಹಿತಿ ನೀಡಿದೆ. ಮಕ್ಕಳಿಗೆ ಶಿಕ್ಷಣ ನೀಡಲು ಡಿಇಡಿ, ಬಿಇಡಿ ಅಧ್ಯಯನ ನಡೆಸಿದ ಶಿಕ್ಷಕರಿಗೆ ಮಾಂಟೆಸ್ಸರಿ ಶಿಕ್ಷಣ ನೀಡಲಾಗುತ್ತದೆ. ಈ ಶಿಕ್ಷಕರಿಗೆ 7,500 ರೂ. ಮತ್ತು ಆಯಾಗಳಿಗೆ 5,000 ರೂ. ಗಳ ಗೌರವ ಸಂಭಾವನೆ ನೀಡುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಹಾಗೆಯೇ ಸರ್ಕಾರದ ಅಧೀನಕ್ಕೆ ಒಳಪಟ್ಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ 35 ಕೋಟಿ ರೂ. ಗಳ ಡಿಜಿಟಲ್ ಲರ್ನಿಂಗ್ ಕೋರ್ಸ್ಗೂ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.