ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಯೆಡಿಪೊರಾ, ಪಟ್ಟನ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಶುಕ್ರವಾರ ಜಂಟಿ ಕಾರ್ಯಾಚರಣೆಯಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿವೆ.
ಪಟ್ಟಾನ್ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ಎನ್ಕೌಂಟರ್ ಭುಗಿಲೆದ್ದಿದೆ. ಈ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ಪಡೆಗಳು ನಿರ್ದಿಷ್ಟ ಮಾಹಿತಿ ಪಡೆದುಕೊಂಡು ಕಾರ್ಯಾಚರಣೆ ನಡೆಸಿವೆ. ಈ ವೇಳೆ ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆ ಎನ್ಕೌಂಟರ್ ಆಗಿ ಮಾರ್ಪಟ್ಟಿತು, ನಂತರ ಯೋಧರು ಗುಂಡಿನ ಚಕಮಕಿ ನಡೆಸಿ ಬಲವಾಗಿ ಪ್ರತೀಕಾರ ತೀರಿಸಿಕೊಂಡರು.
ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಮತ್ತು ವಿಶೇಷ ಕಾರ್ಯಾಚರಣೆ ಗುಂಪು (ಎಸ್ಒಜಿ) ಸಿಬ್ಬಂದಿ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ 92 ಆರ್ಮಿ ಬೇಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.
ಹತ್ಯೆಗೀಡಾದ ಭಯೋತ್ಪಾದಕರ ಗುರುತುಗಳು ಇನ್ನೂ ಪತ್ತೆಯಾಗಿಲ್ಲ.
ಸೆಪ್ಟೆಂಬರ್ 3 ರಂದು, ಬಾರಾಮುಲ್ಲಾದ ಪಟ್ಟನ್ ಪ್ರದೇಶದಲ್ಲಿ ಭಯೋತ್ಪಾದಕ ಗುಂಪಿನ ಮೂವರು ಭೂಗತ ಸದಸ್ಯರನ್ನು (ಒಜಿಡಬ್ಲ್ಯೂ) ಪಡೆಗಳು ಬಂಧಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.