ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶುಕ್ರವಾರಭಾರತೀಯ ಅಮೆರಿಕನ್ನರು ಮತ್ತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಾನು ಹೊಂದಿರುವ ಮಹತ್ವದ ಬಾಂಧವ್ಯದ ಬಗ್ಗೆ ಒತ್ತಿ ಹೇಳಿದ್ದಾರೆ. ಅಲ್ಲದೇ, ನವೆಂಬರ್ 3 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ-ಅಮೆರಿಕನ್ನರು ತನಗೆ ಮತ ಚಲಾಯಿಸುತ್ತಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.
“ನಮಗೆ ಭಾರತ ಮತ್ತು ಪ್ರಧಾನಿ ಮೋದಿ ಅವರಿಂದ ಹೆಚ್ಚಿನ ಬೆಂಬಲವಿದೆ. ಭಾರತೀಯ ಜನರು ಟ್ರಂಪ್ಗೆ ಮತ ಹಾಕುತ್ತಾರೆ ಎಂದು ನಾನು ಭಾವಿಸುತ್ತೇನೆ” ಎಂದು ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ.
ಪಿಎಂ ಮೋದಿಯವರೊಂದಿಗೆ ತನಗೆ ಉತ್ತಮ ಸಂಬಂಧವಿದೆ ಎಂದು ಹೇಳಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನನ್ನ ಸ್ನೇಹಿತ ಮತ್ತು ಶ್ರೇಷ್ಠ ನಾಯಕ” ಎಂದಿದ್ದಾರೆ.
“ಪ್ರಧಾನಿ ಮೋದಿ ನನ್ನ ಸ್ನೇಹಿತ ಮತ್ತು ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಇದು ಸುಲಭದ ಮಾತಲ್ಲ, ಆದರೆ ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಭಾರತೀಯರಿಗೆ ಒಬ್ಬ ಮಹಾನ್ ನಾಯಕ ಸಿಕ್ಕಿದ್ದಾನೆ ಮತ್ತು ಒಬ್ಬ ಮಹಾನ್ ವ್ಯಕ್ತಿ ಸಿಕ್ಕಿದ್ದಾನೆ” ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದಾರೆ.
ಈ ವರ್ಷದ ಫೆಬ್ರವರಿಯಲ್ಲಿ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರೊಂದಿಗೆ ನಡೆಸಿದ ಎರಡು ದಿನಗಳ ಭಾರತ ಭೇಟಿಯನ್ನು ಟ್ರಂಪ್ ಉಲ್ಲೇಖಿಸಿ, “ನಮಗೆ ನಂಬಲಾಗದ ಸಮಯ ಅದಾಗಿತ್ತು ಮತ್ತು ಜನರ ಪ್ರೀತಿ ನಂಬಲಾಗದ್ದು, ಅದು ಅಮೋಘ ಸ್ಥಳ ಮತ್ತು ದೇಶ, ಅದು ಖಂಡಿತವಾಗಿಯೂ ದೊಡ್ಡದಾಗಿದೆ” ಎಂದು ಭಾರತದ ಬಗ್ಗೆ ಟ್ರಂಪ್ ಹೇಳಿದ್ದಾರೆ.
ಅಮೆರಿಕಾದ ಅಧ್ಯಕ್ಷೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಡೆಮೋಕ್ರಾಟ್ ಮತ್ತು ರಿಪಬ್ಲಿಕನ್ ಎರಡೂ ಕಡೆಯವರು ಭಾರತೀಯ ಅಮೆರಿಕನ್ ಸಮುದಾಯವನ್ನು ಹೆಚ್ಚು ಹೆಚ್ಚು ಆಕರ್ಷಿಸುವ ಕಾರ್ಯವನ್ನು ತೀವ್ರಗೊಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.