ನವದೆಹಲಿ: 2021ರ ಆರಂಭದಲ್ಲಿ ಇಸ್ರೋದ ಚಂದ್ರಯಾನ-3 ಉಡಾವಣೆ ಯೋಜನೆ ಸಾಕಾರಗೊಳ್ಳಲಿದೆ ಎಂದು ಬಾಹ್ಯಾಕಾಶ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮಾಹಿತಿ ನೀಡಿದ್ದಾರೆ.
2019ರ ಸೆಪ್ಟೆಂಬರ್ ತಿಂಗಳಿನಲ್ಲಿ ಚಂದ್ರಯಾನ-2 ಯೋಜನೆ ಸಾಕಾರಗೊಂಡಿತ್ತಾದರೂ, ಅದರ ಸಾಫ್ಟ್ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ. ಆದ್ದರಿಂದ ಈ ವರ್ಷದ ಅಂತ್ಯದ ವೇಳೆಗೆ ಚಂದ್ರಯಾನ-3 ಉಪಗ್ರಹ ಉಡಾವಣೆ ಮಾಡುವ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾಹಿತಿ ನೀಡಿತ್ತು.
ಈ ಬಾರಿಯ ಸಾಂಕ್ರಾಮಿಕ ಸೋಂಕು ಕೊರೋನಾ ಕಾರಣದಿಂದಾಗಿ ಈ ವರ್ಷದಲ್ಲಿ ನಡೆಯಬೇಕಾಗಿದ್ದ ಚಂದ್ರಯಾನ-3 ಯೋಜನೆ ವಿಳಂಬವಾಗಿದೆ. ಆದರೆ 2021ರ ಆರಂಭದಲ್ಲೇ ಆರ್ಬಿಟರ್ ರಹಿತ, ಲ್ಯಾಂಡರ್ ಮತ್ತು ರೋವರ್ಗಳ ಸಹಿತ ಚಂದ್ರಯಾನ-3 ಯೋಜನೆ ಸಾಕಾರಗೊಳ್ಳಲಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.