ನವದೆಹಲಿ: ದೇಶೀಯವಾಗಿ ಅಭಿವೃದ್ಧಿಪಡಿಸಿದ ಸ್ಕ್ರಾಮ್ಜೆಟ್ ಪ್ರೊಪಲ್ಷನ್ ವ್ಯವಸ್ಥೆಯನ್ನು ಬಳಸಿಕೊಂಡು ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್ಸ್ಟ್ರೇಟರ್ ವಾಹನವನ್ನು ಯಶಸ್ವಿಯಾಗಿ ಹಾರಾಟ ನಡೆಸಿದ್ದಕ್ಕಾಗಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಅನ್ನು ಶ್ಲಾಘಿಸಿದರು. ಭಾರತ ಯಶಸ್ವಿಯಾಗಿ ಪರೀಕ್ಷಿಸಿದ ಎಚ್ಎಸ್ಟಿಡಿವಿ ವಾಹನವನ್ನು ಆತ್ಮನಿರ್ಭರ ಭಾರತದತ್ತ ಒಂದು ದೊಡ್ಡ ಹೆಜ್ಜೆಯೆಂದು ಪರಿಗಣಿಸಲಾಗುತ್ತಿದೆ.
ಡಿಆರ್ಡಿಒ ನಡೆಸಿದ ಈ ಯಶಸ್ವಿ ಪರೀಕ್ಷೆಯ ಮೂಲಕ ಮುಂದಿನ ಹಂತಕ್ಕೆ ಮುನ್ನಡೆಯಲು ಎಲ್ಲಾ ನಿರ್ಣಾಯಕ ತಂತ್ರಜ್ಞಾನಗಳನ್ನು ಈಗ ಸ್ಥಾಪಿಸಲಾಗಿದೆ ಎಂದು ಸಿಂಗ್ ಹೇಳಿದರು.
‘ಡಿಅರ್ಡಿಓ ಇಂಡಿಯಾ ಇಂದು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಸ್ಕ್ರಾಮ್ಜೆಟ್ ಪ್ರೊಪಲ್ಷನ್ ಸಿಸ್ಟಮ್ ಬಳಸಿ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋಂಟ್ರೇಟರ್ ವಾಹನವನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಈ ಯಶಸ್ಸಿನೊಂದಿಗೆ, ಮುಂದಿನ ಹಂತಕ್ಕೆ ಮುನ್ನಡೆಯಲು ಎಲ್ಲಾ ನಿರ್ಣಾಯಕ ತಂತ್ರಜ್ಞಾನಗಳನ್ನು ಈಗ ಸ್ಥಾಪಿಸಲಾಗಿದೆ” ಎಂದಿದ್ದಾರೆ.
ಸಿಂಗ್ ಅವರು ಯೋಜನೆಗೆ ಸಂಬಂಧಿಸಿದ ವಿಜ್ಞಾನಿಗಳೊಂದಿಗೆ ಮಾತನಾಡಿದರು ಮತ್ತು ಸಾಧನೆಗಾಗಿ ಅವರನ್ನು ಅಭಿನಂದಿಸಿದರು. ” ಆತ್ಮನಿರ್ಭರ ಭಾರತದ ಪ್ರಧಾನಮಂತ್ರಿಯ ದೃಷ್ಟಿಕೋನವನ್ನು ಸಾಕಾರಗೊಳಿಸುವ ಈ ಹೆಗ್ಗುರುತಿನ ಸಾಧನೆಗೆ ನಾನು ಡಿಆರ್ಡಿಓಗೆ ಅಭಿನಂದಿಸುತ್ತೇನೆ. ನಾನು ಯೋಜನೆಗೆ ಸಂಬಂಧಿಸಿದ ವಿಜ್ಞಾನಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಈ ದೊಡ್ಡ ಸಾಧನೆಗೆ ಅವರನ್ನು ಅಭಿನಂದಿಸಿದ್ದೇನೆ. ಭಾರತವು ಅವರ ಬಗ್ಗೆ ಹೆಮ್ಮೆಪಡುತ್ತದೆ’ ಎಂದಿದ್ದಾರೆ.
The @DRDO_India has today successfully flight tested the Hypersonic Technology Demontrator Vehicle using the indigenously developed scramjet propulsion system. With this success, all critical technologies are now established to progress to the next phase.
— Rajnath Singh (@rajnathsingh) September 7, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.