News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬೆಂಗಳೂರು: ವಾಯುಪಡೆಯ ನೇಮಕಾತಿಗೆ ಇಂದಿನಿಂದ ನೋಂದಣಿ ಆರಂಭ

ಬೆಂಗಳೂರು: ಭಾರತೀಯ ವಾಯುಪಡೆಯ ಗ್ರೂಪ್ ಎಕ್ಸ್ ಟೆಕ್ನಿಕಲ್ ಟ್ರೇಡ್‌ನ ಅಡಿಯಲ್ಲಿ ಏರ್‌ಮೆನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ‌ಯನ್ನು ಮಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಸಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಂದಿನಿಂದ ಸೆ. 11 ರ ವರೆಗೆ www.airmenselection.cdac.in ನಲ್ಲಿ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.

ರಾಜ್ಯದ ಅಭ್ಯರ್ಥಿಗಳ ಆಯ್ಕೆಗೆ ಸೆ. 23 ರಿಂದ ಅಕ್ಟೋಬರ್ 4 ರ ವರೆಗೂ ನೇಮಕಾತಿ ಸಮಾವೇಶ ನಡೆಯಲಿದೆ. ಇದರಲ್ಲಿ ಹೆಸರು ನೋಂದಾಯಿಸಲು 2000 ಜನವರಿ 17 ರಿಂದ 2003 ಡಿಸೆಂಬರ್ 31 ರೊಳಗೆ ಜನಿಸಿದ ಅವಿವಾಹಿತ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. ಇಂಟರ್ ಮೀಡಿಯೇಟ್, ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯದಲ್ಲಿ ಕಡ್ಡಾಯವಾಗಿ ಶಿಕ್ಷಣ ಪಡೆದವರಿಗೆ, ಗರಿಷ್ಠ 50 ಅಂಕಗಳನ್ನು ಗಳಿಸಿದವರಿಗೆ ಈ ಪ್ರಕ್ರಿಯೆಯಲ್ಲಿ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ.

ಸಿಬಿಎಸ್‌ಸಿಯಿಂದ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ ಇಂಗ್ಲಿಷ್ ವಿಷಯದಲ್ಲಿ 50% ಅಂಕವನ್ನು ಪಡೆಯಬೇಕು ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಸಂಸ್ಥೆಗಳಿಂದ ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ಇತರ ವಿಷಯಗಳಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಮುಗಿಸಿರಬೇಕಾಗುತ್ತದೆ. ನೇಮಕಾತಿಯ ಸ್ಥಳದಲ್ಲಿ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಮೂಲ ಅಂಕಪಟ್ಟಿ, ಸೆಲ್ಫ್ ಅಟೆಸ್ಟೆಡ್ ಪ್ರಮಾಣಪತ್ರಗಳ ನಾಲ್ಕು ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 30 ಫೋಟೋಗಳನ್ನು ನೀಡಬೇಕಾಗುತ್ತದೆ ಎಂದು ಮೂಲಗಳು ಮಾಹಿತಿ ನೀಡಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top