ಕಲ್ಬುರ್ಗಿ: ಕೆಎಸ್ಆರ್ಟಿಸಿ ನಿಗಮದ ಬಸ್ಸುಗಳಲ್ಲಿ ಸಂಚಾರ ಮಾಡುವಾಗ ಅನುಸರಿಸುವಂತೆ ಸೂಚಿಸಲಾಗಿದ್ದ ಸಾಮಾಜಿಕ ಅಂತರ ನಿಯಮವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಮಾಹಿತಿ ನೀಡಿದ್ದಾರೆ.
ದ್ವಿಚಕ್ರ, ತ್ರಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಸಾಮಾಜಿಕ ಅಂತರದ ನಿಯಮವನ್ನು ಅನುಸರಿಸಲಾಗುತ್ತಿಲ್ಲ. ಆದ್ದರಿಂದ ಬಸ್ಸುಗಳಲ್ಲಿಯೂ ಪ್ರಯಾಣಿಕರ ಸಂಖ್ಯೆಯನ್ನು ನಿರ್ಬಂಧ ಮಾಡುವುದರಲ್ಲಿ ಅರ್ಥವಿಲ್ಲ. ಆದ್ದರಿಂದ ಈ ನಿಯಮವನ್ನು ಹಿಂಪಡೆಯಲಾಗುವುದು. ಆದರೆ ಕಡ್ಡಾಯವಾಗಿ ಮಾಸ್ಕ್ ಧಾರಣೆ ಮಾಡಬೇಕು ಎಂದು ಅವರು ಸೂಚಿಸಿದ್ದಾರೆ.
ಈಗಾಗಲೇ ಸಂಸ್ಥೆಯ ವತಿಯಿಂದ ಅನೇಕ ಕಡೆಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲಾಗಿದೆ. ಅಂತರರಾಜ್ಯ ಬಸ್ಸುಗಳ ಸಂಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಹೊರತುಪಡಿಸಿ ಇತರ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ. ಆಂಧ್ರ ಪ್ರದೇಶದಿಂದ ಒಪ್ಪಿಗೆ ಸಿಕ್ಕಿದೆ. ಉಳಿದ ರಾಜ್ಯಗಳಿಂದ ಪ್ರತಿಕ್ರಿಯೆ ಬರಬೇಕಷ್ಟೇ. ಈ ಕುರಿತಂತೆ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.