ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಪಿಎಂ ಬೀದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ (ಪಿಎಂ ಸ್ವನಿಧಿ) ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ, ಯಾವುದೇ ಸಾಂಕ್ರಾಮಿಕ ಅಥವಾ ವಿಪತ್ತು ಬಡವರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಈ ವರ್ಗದ ತೊಂದರೆಗಳನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಪ್ರಾರಂಭಿಸಿದೆ ಎಂದಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ತತ್ತರಿಸಿದ ಬಡ ಬೀದಿ ಬದಿ ವ್ಯಾಪಾರಿಗಳಿಗೆ ಮತ್ತೆ ತಮ್ಮ ಚಟುವಟಿಕೆಗಳನ್ನು ಆರಂಭಿಸಲು ಸಹಾಯ ಮಾಡಲು ಸರ್ಕಾರವು ಜೂನ್ 1 ರಂದು ಕೇಂದ್ರ ಪಿಎಂ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿತು. ಈ ಯೋಜನೆಯಡಿ ನೀಡಲಾದ ಸಾಲಗಳಿಗೆ ಬಡ್ಡಿ ಇರುವುದಿಲ್ಲ.
ಈ ಯೋಜನೆಯಲ್ಲಿ ಮಧ್ಯಪ್ರದೇಶವು ಎರಡು ತಿಂಗಳೊಳಗೆ ಆದರ್ಶಪ್ರಾಯವಾದ ಕೆಲಸವನ್ನು ಮಾಡಿದೆ ಎಂದು ಪ್ರಧಾನಿ ಹೇಳಿದರು. ಇತರ ರಾಜ್ಯಗಳು ಸಹ ಈ ರಾಜ್ಯದಿಂದ ಸ್ಫೂರ್ತಿ ಪಡೆಯುತ್ತವೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.
ಇಂದೋರ್, ರೈಸನ್ ಮತ್ತು ಗ್ವಾಲಿಯರ್ ಜಿಲ್ಲೆಗಳಲ್ಲಿ ಈ ಯೋಜನೆಯ ಫಲಾನುಭವಿಗಳೊಂದಿಗೆ ಮೋದಿ ಸಂವಹನ ನಡೆಸಿದರು. ಉಜ್ವಲ ಯೋಜನೆ, ಆಯುಷ್ಮಾನ್ ಭಾರತ್ ಯೋಜನೆ, ಪಿಎಂ ಆವಾಸ್ ಮತ್ತು ಸರ್ಕಾರದ ಇತರ ಯೋಜನೆಗಳ ಪ್ರಯೋಜನಗಳ ಬಗ್ಗೆಯೂ ಪ್ರಧಾನಿ ವಿಚಾರಿಸಿದರು.
ಸ್ವನಿಧಿ ಯೋಜನೆ ಬಡವರಿಗೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದರು. ಇದು ಬೀದಿ ವ್ಯಾಪಾರಿಗಳ ಜೀವನವನ್ನು ಬದಲಾಯಿಸುತ್ತದೆ. ಪ್ರಸ್ತುತ ಈ ಯೋಜನೆಯ ಲಾಭ ಪಡೆಯದ ಅರ್ಹ ಅಭ್ಯರ್ಥಿಗಳಿಗೆ ಈ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಅವರು ಭರವಸೆ ನೀಡಿದರು. ವ್ಯವಹಾರವನ್ನು ಮತ್ತೆ ಹಳಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.