ಹುಬ್ಬಳ್ಳಿ: ರಾಜ್ಯದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಒಂದಾದ ಹುಬ್ಬಳ್ಳಿಯ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿ ಅವರ ಹೆಸರನ್ನಿಡುವಂತೆ ಕೇಂದ್ರದ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಉತ್ತರ ಕರ್ನಾಟಕದ ಜನರ ಅಚ್ಚುಮೆಚ್ಚಿನ ಆರಾಧ್ಯ ದೈವ ಹುಬ್ಬಳ್ಳಿಯ ಸಿದ್ದಾರೂಢರ ಹೆಸರನ್ನು ವಾಣಿಜ್ಯ ನಗರಿಯ ರೈಲು ನಿಲ್ದಾಣಕ್ಕೆ ಇರಿಸುವಂತೆ ಕೇಂದ್ರ ಸರ್ಕಾರದ ಗೃಹ ಇಲಾಖೆಯಿಂದಲೇ ರಾಜ್ಯದ ಕಂದಾಯ ಇಲಾಖೆಗೆ ಆದೇಶವನ್ನು ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಈ ಸಂಬಂಧ ಹರ್ಷ ವ್ಯಕ್ತಪಡಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ದಾರೂಢ ಸ್ವಾಮೀಜಿಗಳ ಹೆಸರನ್ನು ನಾಮಕರಣ ಮಾಡಲು ಅನುಮೋದಿಸಿದ್ದಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದ್ದಾರೆ.
I thank hon'ble HM @AmitShah ji and @PiyushGoyal ji for giving approval to change the name of Hubballi Railway Station to #SiddharoodhaSwamiji Railway Station – #Hubballi.
It is a long-standing demand of local people and State Leaders, which is fulfilled now. pic.twitter.com/4WJioAFlPy
— Suresh Angadi (@SureshAngadi_) September 9, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.