ಭುವನೇಶ್ವರ: ಗುಪ್ತಚರ ಮಾಹಿತಿ ಆಧಾರಿತ ಕಾರ್ಯಾಚರಣೆಯನ್ನು ನಡೆಸಿದ ಒಡಿಶಾ ಪೊಲೀಸರು ಬುಧವಾರ ಐದು ಮಂದಿ ನಕ್ಸಲರನ್ನು ಸಂಹಾರ ಮಾಡಿದ್ದಾರೆ.
ಕಲಹಂಡಿ ಪೊಲೀಸರು ಕಲಹಂಡಿ ಮತ್ತು ಕಂಧಮಾಲ್ ಜಿಲ್ಲೆಗಳ ಗಡಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಈ ಕಾರ್ಯಾಚರಣೆಯ ಸಮಯದಲ್ಲಿ ನಿನ್ನೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪೊಲೀಸರು ಮತ್ತು ನಕ್ಸಲರ ನಡುವೆ ಗುಂಡಿನ ವಿನಿಮಯ ನಡೆದಿದ್ದು, ಈ ವೇಳೆ ನಾಲ್ಕು ಮಂದಿ ನಕ್ಸಲರು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ.
ನಂತರ, ಈ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆಯ ವೇಳೆ, ಮತ್ತೊಬ್ಬ ನಕ್ಸಲನ ಮೃತದೇಹ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ. ಹೀಗಾಗಿ ಮೃತ ನಕ್ಸಲರ ಸಂಖ್ಯೆ 5 ಎಂದು ಮೂಲಗಳು ಸ್ಪಷ್ಟಪಡಿಸಿವೆ. ಘಟನೆ ನಡೆದ ಸ್ಥಳದಿಂದ 2 ಎಸ್ಎಲ್ಆರ್ ಮತ್ತು 4 ದೇಶಿ ನಿರ್ಮಿತ ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರ ಪ್ರಕಾರ, ಸುಮಾರು ಒಂದು ಗಂಟೆ ಕಾಲ ನಡೆದ ಶೂಟ್ ಔಟ್ನಲ್ಲಿ, ವಿಶೇಷ ಕಾರ್ಯಾಚರಣೆ ಗುಂಪಿನ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದು, ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.
ಎಸ್ಒಜಿ, ಡಿವಿಎಫ್, ಮತ್ತು ಸಿಆರ್ಪಿಎಫ್ನ ಹೆಚ್ಚುವರಿ ತಂಡಗಳನ್ನು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಲು ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇನ್ನಷ್ಟು ನಕ್ಸಲರು ಈ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಬಗ್ಗೆ ಅನುಮಾನವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.