ನವದೆಹಲಿ: ಹರಿಯಾಣದ ಅಂಬಾಲ ವಾಯುನೆಲೆಯಲ್ಲಿದ್ದ 5 ರಫೇಲ್ ಯುದ್ಧ ವಿಮಾನಗಳನ್ನು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರಿಸುವ ಕಾರ್ಯಕ್ರಮ ಇಂದು ನಡೆಯಿತು. ಈ ಹಿನ್ನೆಲೆಯಲ್ಲಿ ವಾಯು ನೆಲೆಯಲ್ಲಿ ಸರ್ವ ಧರ್ಮ ಪೂಜಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಫ್ರಾನ್ಸ್ನ ರಕ್ಷಣಾ ಸಚಿವರಾದ ಫ್ಲೋರೆನ್ಸ್ ಪಾರ್ಲಿ ಸೇರಿದಂತೆ ಇತರ ರಕ್ಷಣಾ ವಲಯದ ಉನ್ನತ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದರು.
ಭಾರತಕ್ಕೆ ರಫೇಲ್ ಯುದ್ಧ ವಿಮಾನಗಳನ್ನು ನೀಡುವ ಸಂಬಂಧ ಫ್ರಾನ್ಸ್ ಜೊತೆಗೆ ಈಗಾಗಲೇ 59,000 ಕೋಟಿ ರೂ. ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಅದರಲ್ಲಿ 10 ವಿಮಾನಗಳನ್ನು ಡಾನ್ ಏವಿಯೇಷನ್ ಕಂಪೆನಿ ಭಾರತಕ್ಕೆ ಹಸ್ತಾಂತರ ಮಾಡಿದೆ. ಅದರಲ್ಲಿ 5 ರಫೇಲ್ಗಳು ಭಾರತದ ಅಂಬಾಲ ವಾಯುನೆಲೆಯಲ್ಲಿದ್ದರೆ, ಮತ್ತೈದು ವಿಮಾನಗಳು ಪೈಲಟ್ ತರಬೇತಿಗಾಗಿ ಫ್ರಾನ್ಸ್ನಲ್ಲೇ ಇವೆ.
ಜುಲೈ 29 ರಂದು ಈ ಐದು ರಫೇಲ್ ಯುದ್ಧ ವಿಮಾನಗಳು ಭಾರತಕ್ಕೆ ಬಂದಿಳಿದಿದ್ದವು. 2021ರ ಒಳಗೆ ಎಲ್ಲಾ ವಿಮಾನಗಳೂ ಭಾರತಕ್ಕೆ ಬರುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.