ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಸಾಂಬಾ ಪ್ರದೇಶದಿಂದ ಶಸ್ತ್ರಾಸ್ತ್ರಗಳ ಸಾಗಾಟ ಮಾಡುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಶ್ರೀನಗರ- ಜಮ್ಮು-ಕಾಶ್ಮೀರದ ಹೆದ್ದಾರಿ ಸಮೀಪ ಬಂಧಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಮಾಹಿತಿ ನೀಡಿದ್ದಾರೆ.
ಪಂಜಾಬ್ ರಾಜ್ಯದಿಂದ ಅಗತ್ಯ ವಸ್ತುಗಳನ್ನು ಸಾಗಾಟ ಮಾಡುತ್ತಿದ್ದ ವಾಹನದಲ್ಲೇ ಭಯೋತ್ಪಾದಕರು ಶಸ್ತ್ರಾಸ್ತ್ರಗಳ ಸಾಗಾಟವನ್ನು ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಈ ಸಂದರ್ಭದಲ್ಲಿ ಪಾಕಿಸ್ಥಾನ ಪ್ರೇರಿತ, ಸಕ್ರಿಯವಾಗಿ ಉಗ್ರ ಚಟುವಟಿಕೆ ನಡೆಸುತ್ತಿದ್ದ ಉಗ್ರಗಾಮಿಗಳ ಜೊತೆಗೂ ಬಂಧಿತ ಭಯೋತ್ಪಾದಕರು ನಂಟನ್ನು ಹೊಂದಿದ್ದರು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.
ಈ ಉಗ್ರರು ಜಮ್ಮುವಿನ ಸಾಂಬಾದಿಂದ ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಸಾಗಾಟ ಮಾಡುವ ಭಾರೀ ಸಂಚನ್ನು ರೂಪಿಸಿದ್ದರು ಎಂಬುದು ತನಿಖೆಯ ವೇಳೆ ತಿಳಿದು ಬಂದಿದೆ.
ಇತ್ತೀಚೆಗೆ ಕಣಿವೆ ರಾಜ್ಯದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು ಭಾರತೀಯ ಭದ್ರತಾ ಪಡೆಗಳು ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಲೇ ಬಂದಿವೆ. ಇದೀಗ ಶಸ್ತ್ರಾಸ್ತ್ರ ಸಾಗಿಸುತ್ತಿದ್ದ ಇಬ್ಬರು ಉಗ್ರರನ್ನು ಬಂಧಿಸಿದ್ದು, ಅವರಿಂದ ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.