ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 11ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ “21ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಶಿಕ್ಷಣ ಸಚಿವಾಲಯದ ಶಿಕ್ಷಣ ಪರ್ವತ ಅಂಗವಾಗಿ ಸೆಪ್ಟೆಂಬರ್ 10 ಮತ್ತು 11ರಂದು ಎರಡು ದಿನಗಳ ಸಮಾವೇಶವನ್ನು ಆಯೋಜಿಸಲಾಗಿದೆ.
ಇದಕ್ಕೂ ಮುನ್ನ ಆಗಸ್ಟ್ 7ರಂದು ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಅಡಿಯಲ್ಲಿ ಉನ್ನತ ಶಿಕ್ಷಣದಲ್ಲಿ ಪರಿವರ್ತನಾತ್ಮಕ ಸುಧಾರಣೆ ಸಮಾವೇಶ ಉದ್ದೇಶಿಸಿ ಭಾಷಣ ಮಾಡಿದ್ದರು. ಸೆಪ್ಟೆಂಬರ್ 7ರಂದು ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ರಾಜ್ಯಪಾಲರುಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿ 2020 21ನೇ ಶತಮಾನದ ಮೊದಲ ಶಿಕ್ಷಣ ನೀತಿಯಾಗಿದ್ದು, 1986 ರ ಹಿಂದಿನ ರಾಷ್ಟ್ರೀಯ ಶಿಕ್ಷಣ ನೀತಿಯ 34 ವರ್ಷಗಳ ನಂತರ ಇದನ್ನು ತರಲಾಗಿದೆ. ಹೊಸ ಶಿಕ್ಷಣ ನೀತಿಯು ಶಾಲಾ ಮತ್ತು ಉನ್ನತ ಶಿಕ್ಷಣಗಳೆರಡರ ಮಟ್ಟದಲ್ಲಿ ಪ್ರಮುಖ ಸುಧಾರಣೆಯನ್ನು ನಿರ್ದೇಶಿಸುತ್ತದೆ.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಭಾರತವನ್ನು ಸಮಾನ ಮತ್ತು ಚಲನಶೀಲ ಜ್ಞಾನ ತಾಣವಾಗಿ ಮಾಡುವ ಉದ್ದೇಶ ಹೊಂದಿದೆ. ಇದು ಭಾರತವನ್ನು ನೇರವಾಗಿ ಜಾಗತಿಕ ಮಹಾನ್ ಶಕ್ತಿಶಾಲಿ ರಾಷ್ಟ್ರವಾಗಿ ಪರಿವರ್ತಿಸಲು ಭಾರತ ಕೇಂದ್ರದ ಶಿಕ್ಷಣ ವ್ಯವಸ್ಥೆಯನ್ನು ಒದಗಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.