ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 824 ತಜ್ಞ ವೈದ್ಯರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದ ವಿಶೇಷ ನೇಮಕಾತಿ ಸಮಿತಿ ಅನುಮತಿ ನೀಡಿದೆ.
ಕೊರೋನಾ ಸಂದರ್ಭದಲ್ಲಿ 50 ವರ್ಷ ಮೇಲ್ಪಟ್ಟ ಕೆಲವು ಹಿರಿಯ ವೈದ್ಯಾಧಿಕಾರಿಗಳಿಗೆ ಕಾರ್ಯದಿಂದ ವಿನಾಯಿತಿ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ ಇದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಈಗಾಗಲೇ ಮಂಜೂರಾಗಿದ್ದ 2832 ತಜ್ಞರ ಹುದ್ದೆಯಲ್ಲಿ 2008 ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಪ್ರಸ್ತುತ ಖಾಲಿ ಇರುವ 1246 ಸಾಮಾನ್ಯ ಕರ್ತವ್ಯ ವೈದ್ಯರು ಮತ್ತು 88 ದಂತ ವೈದ್ಯರ ನೇಮಕಕ್ಕೆ ಸೂಚಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮಾಹಿತಿ, ಅಧಿಸೂಚನೆಗಳನ್ನು karunadu.karnataka.gov.in ವೆಬ್ಸೈಟ್ನಲ್ಲಿ ಪ್ರಕಟಿಸುವುದಾಗಿ ಉನ್ನತ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.