ಬೆಂಗಳೂರು: ರಾಜ್ಯದ 23 ಜಿಲ್ಲೆಗಳಿಗೆ ಸಂಬಂಧಿಸಿದಂತೆ 130 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಲಾಗಿದ್ದು, ಅಲ್ಲೆಲ್ಲಾ ಪೂರಕ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದೆ.
ಈ ಸಂಬಂಧ ಪ್ರವಾಹ ಪೀಡಿತ ಜಿಲ್ಲೆಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಮಂಡ್ಯ, ದಾವಣಗೆರೆ, ಉತ್ತರ ಕನ್ನಡ, ಚಾಮರಾಜನಗರ, ಮೈಸೂರು, ಬಳ್ಳಾರಿ, ಕೊಪ್ಪಳ, ರಾಯಚೂರು, ಕಲಬುರ್ಗಿ, ಯಾದಗಿರಿ, ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಪ್ರವಾಹಪೀಡಿತ ಜಿಲ್ಲೆಗಳಾಗಿವೆ ಎಂದು ರಾಜ್ಯ ಸರ್ಕಾರ ಈ ಪಟ್ಟಿಯಲ್ಲಿ ತಿಳಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದ್ರೆ, ಪುತ್ತೂರು, ಶಿವಮೊಗ್ಗ ಜಿಲ್ಲೆಯ ಹೊಸನಗರ, ಭದ್ರಾವತಿ, ಸಾಗರ, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಶಿವಮೊಗ್ಗ, ತೀರ್ಥಹಳ್ಳಿ ತಾಲೂಕು, ಚಿಕ್ಕಮಗಳೂರಿನ ಕೊಪ್ಪ, ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಎನ್ಆರ್ಪುರ, ತರಿಕೆರೆ, ಕೊಡಗಿನ ಮಡಿಕೇರಿ, ಸೋಮವಾರ ಪೇಟೆ, ವಿರಾಜಪೇಟೆ ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿರುವುದಾಗಿಯೂ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಉಡುಪಿಯ ಬೈಂದೂರು, ಬ್ರಹ್ಮಾವರ, ಹೆಬ್ರಿ, ಕಾಪು, ಕಾರ್ಕಳ, ಕುಂದಾಪುರ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಹೊನ್ನಾವರ, ಕಾರವಾರ, ಕುಮಟಾ, ಶಿರಸಿ, ಅಂಕೋಲ, ಮುಂಡಗೋಡ, ಸಿದ್ಧಾಪುರ, ಸೂಪ, ಯಲ್ಲಾಪುರ ತಾಲೂಕು, ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಹಾಸನದ ಆಲೂರು, ಅರಕಲಗೂಡು, ಬೇಲೂರು, ಹಾಸನ, ಸಕಲೇಶಪುರ ತಾಲೂಕು, ಧಾರವಾಡ ಜಿಲ್ಲೆಯ ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಹುಬ್ಬಳ್ಳಿನಗರ, ಕಲಘಟಗಿ, ಕದಗೋಳ, ನವಲಗುಂದ ತಾಲೂಕು, ಹಾವೇರಿಯ ಹಾನಗಲ್, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ರಟ್ಟಿಹಳ್ಳಿ, ಶಿಗ್ಗಾಂವ್, ಗದಗದ ಮುಂಡರಗಿ, ನರಗುಂದ, ರೋಣ, ಶಿರಹಟ್ಟಿ, ವಿಜಯಪುರದ ಬಬಲೇಶ್ವರ, ಕೋಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಕೊಪ್ಪಳದ ಗಂಗಾವತಿ, ಕೊಪ್ಪಳ, ಕಾರಟಗಿ, ಮಂಡ್ಯದ ಕೆ.ಆರ್. ಪೇಟೆ, ಮೈಸೂರಿನ ಹುಣಸೂರು, ಕೆಆರ್ ನಗರ, ಮೈಸೂರು, ಪಿರಿಯಾಪಟ್ಟಣ, ಬಾಗಲಕೋಟೆ, ಬೆಳಗಾವಿ, ಬೀದರ್, ಯಾದಗಿರಿ, ಕಲಬುರ್ಗಿ, ರಾಯಚೂರು, ಬಳ್ಳಾರಿಯ ಬಹುತೇಕ ಎಲ್ಲ ತಾಲೂಕುಗಳನ್ನು ಪ್ರವಾಹಪೀಡಿತ ತಾಲೂಕುಗಳೆಂದು ಸರ್ಕಾರ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.