ಬೆಂಗಳೂರು: ಕೊರೋನಾ ಸೋಂಕಿನ ಕಾರಣದಿಂದಾಗಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರು ಸಮಸ್ಯೆ ಅನುಭವಿಸುವಂತಾಗಿದೆ. ಅಂತಹ 3.5 ಲಕ್ಷ ಶಿಕ್ಷಕರಿಗೆ ನೆರವಾಗಲು ರಾಜ್ಯ ಸರ್ಕಾರ ಬದ್ಧವಾಗಿರುವುದಾಗಿ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಯಾವುದೇ ರೂಪದಲ್ಲಾದರೂ ಕೊರೋನಾದಿಂದ ಸಮಸ್ಯೆಗೆ ತುತ್ತಾಗಿರುವ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ಸಹಾಯ ಒದಗಿಸುವ ಭರವಸೆಯನ್ನೂ ಅವರು ನೀಡಿದರು.
ಈಗಾಗಲೇ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಹಾಗೆಯೇ ಶಾಲಾರಂಭಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲಲೂ ಉತ್ಸಾಹ ತೋರುತ್ತಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದರು. ರಾಜ್ಯದ ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗದಂತೆ ಕ್ರಮ ಕೈಗೊಳ್ಳುವುದಾಗಿಯೂ ಅವರು ಹೇಳಿದರು.
ಇನ್ನು ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಕ ಸ್ನೇಹಿ ವರ್ಗಾವಣಾ ಕ್ರಮ ಜಾರಿಗೆ ತರಲಾಗುತ್ತಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಗೂ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎಲ್ಲರಿಗೂ ಉತ್ತಮ ಶಿಕ್ಷಣ ಒದಗಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಸರ್ಕಾರದ ಶೈಕ್ಷಣಿಕ ಸಲಹೆಗಾರ ಎಂ. ಆರ್. ದೊರೆಸ್ವಾಮಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.