ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರಗಾಮಿ ಮತ್ತು ಇಬ್ಬರು ಉಗ್ರ ಸಹಚರರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ದಂಗಿರ್ಪುರ ಪ್ರದೇಶದಲ್ಲಿ ಭಯೋತ್ಪಾದಕರು ಚಟುವಟಿಕೆಗಳನ್ನು ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಈ ಕಾರ್ಯಾಚರಣೆ ನಡೆಸಿದೆ. ಈ ಸಂದರ್ಭದಲ್ಲಿ ಒಬ್ಬ ಭಯೋತ್ಪಾದಕ ಮತ್ತು ಇಬ್ಬರು ಭಯೋತ್ಪಾದಕರ ಸಹಚರರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಬಂಧಿತರಿಂದ ಒಂದು ಪಿಸ್ತೂಲ್, 12 ರೌಂಡ್ಸ್ 9 ಎಂಎಂ ಪಿಸ್ತೂಲ್, ಚೀನಾ ಮೂಲದ ಗ್ರೆನೇಡ್, ಮ್ಯಾಗಜೀನ್ ಸೇರಿದಂತೆ ಮತ್ತಿತರ ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಬಂಧಿತರನ್ನು ವಿಚಾರಣೆಗೆ ಒಳಪಡಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.