ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 81,500 ಕ್ಕೂ ಹೆಚ್ಚು ಜನರು ಕೊರೋನಾ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಈವರೆಗೆ ದೇಶದಲ್ಲಿ 36 ಲಕ್ಷ 24 ಸಾವಿರ ಜನರು ವೈರಲ್ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡಿದ್ದಾರೆ. ಒಟ್ಟಾರೆ ಚೇತರಿಕೆ ಪ್ರಮಾಣವು ಶೇಕಡಾ 77.77 ರಷ್ಟಿದೆ. ಚೇತರಿಸಿಕೊಂಡ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ನಡುವಿನ ಅಂತರವು ಕ್ರಮೇಣ ಹಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.
ಒಟ್ಟು ಪ್ರಕರಣಗಳಲ್ಲಿ ಮೂರರಲ್ಲಿ ನಾಲ್ಕನೇ ಒಂದು ಭಾಗದಷ್ಟು ಚೇತರಿಸಿಕೊಂಡಿವೆ, ನಾಲ್ಕನೇ ಒಂದು ಭಾಗಕ್ಕಿಂತಲೂ ಕಡಿಮೆ ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿವೆ. ಚೇತರಿಕೆಯಲ್ಲಿನ ನಿರಂತರ ಹೆಚ್ಚಳವು ದೇಶದ ಸಕ್ರಿಯ ಪ್ರಕರಣವನ್ನು ಕಡಿತ ಮಾಡುತ್ತಿದೆ. ಒಟ್ಟು ಪ್ರಕರಣಗಳಲ್ಲಿ ಒಟ್ಟು ಸಕಾರಾತ್ಮಕ ಪ್ರಕರಣಗಳು ಕೇವಲ 20.56 ಶೇಕಡಾ ಮಾತ್ರ ಇದೆ.
ಜಾಗತಿಕ ಸರಾಸರಿಗೆ ಹೋಲಿಸಿದರೆ ದೇಶವು ಕಡಿಮೆ ಸಾವಿನ ಪ್ರಮಾಣವನ್ನು ಕಾಯ್ದುಕೊಂಡಿದೆ. ಪ್ರಸ್ತುತ, ಭಾರತದ ಸಾವಿನ ಪ್ರಮಾಣವು ಶೇಕಡಾ 1.66 ರಷ್ಟಿದೆ, 17 ರಾಜ್ಯಗಳು ಮತ್ತು ಕೇಂದ್ರಾಡಳಿ ಪ್ರದೇಶಗಳಲ್ಲಿ ಸಾವಿನ ಪ್ರಮಾಣ ಶೇಕಡಾ 1 ಕ್ಕಿಂತಲೂ ಕಡಿಮೆ ಇದೆ ಎಂದು ವರದಿಗಳು ತಿಳಿಸಿವೆ.
ಕಳೆದ 24 ಗಂಟೆಗಳಲ್ಲಿ, ಸುಮಾರು 97,000 ಹೊಸ ಪ್ರಕರಣಗಳು ವರದಿಯಾಗಿವೆ ಮತ್ತು ಒಟ್ಟು ಸಕ್ರಿಯ ಪ್ರಕರಣಗಳು ಸುಮಾರು 9,58,000 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,201 ಸಾವುನೋವುಗಳು ಸಂಭವಿಸಿದ್ದು, ಒಟ್ಟು ಸಾವು 77,472ಕ್ಕೆ ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.