ಮುಂಬಯಿ: ಶಿವಸೇನೆಯ ಗೂಂಡಾಗಳಿಂದ ಹಲ್ಲೆಗೊಳಗಾದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಶರ್ಮಾ ಅವರ ಮೇಲೆ ನಡೆದ ದಾಳಿಯನ್ನು ತೀವ್ರವಾಗಿ ಖಂಡಿಸಿದ ರಾಜನಾಥ್ ಸಿಂಗ್ ಅವರು, ಇಂತಹ ಕೃತ್ಯಗಳನ್ನು ಸಹಿಸಲು ಅಥವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.
ಶರ್ಮಾ ಅವರು ಪ್ರಸ್ತುತ ಮುಂಬಯಿಯ ಶತಾಬ್ದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ರಾಜನಾಥ್ ಸಿಂಗ್ ಹಾರೈಸಿದ್ದಾರೆ.
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಗೇಲಿ ಮಾಡುವ ಕಾರ್ಟೂನ್ ಅನ್ನು ಫಾರ್ವರ್ಡ್ ಮಾಡಿದ್ದಕ್ಕಾಗಿ ಶಿವಸೇನಾ ಕಾರ್ಯಕರ್ತರು ಮಾಜಿ ನೌಕಾಪಡೆಯ ಅಧಿಕಾರಿಯನ್ನು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ಇಂದು ಬೆಳಿಗ್ಗೆ ಆರು ಮಂದಿಯನ್ನು ಬಂಧಿಸಲಾಗಿತ್ತು, ಆದರೆ ಬಂಧನವಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಜಾಮೀನು ನೀಡಿ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
Spoke to retired naval officer, Shri Madan Sharma who was attacked by hooligans in Mumbai and enquired about his health. Such attacks on Ex-Servicemen is completely unacceptable and deplorable. I wish Madanji a speedy recovery.
— Rajnath Singh (@rajnathsingh) September 12, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.