ನವದೆಹಲಿ: ನಾಳೆಯಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದೆ. ಆದರೆ ಕೊರೋನಾವೈರಸ್ ಕಾರಣದಿಂದಾಗಿ ಈ ಬಾರಿ ಅಧಿವೇಶನಕ್ಕೂ ಮುಂಚಿತವಾಗಿ ನಡೆಸಲಾಗುವ ಸರ್ವಪಕ್ಷ ಸಭೆಯನ್ನು ರದ್ದುಪಡಿಸಲಾಗಿದೆ.
ನಾಳೆ ಆರಂಭಗೊಂಡು ಅಕ್ಟೋಬರ್ 1 ರಂದು ಮುಕ್ತಾಯಗೊಳ್ಳುವ ಅಧಿವೇಶನದ ಕಾರ್ಯಸೂಚಿಯನ್ನು ಚರ್ಚಿಸಲು ಇಂದು ಬೆಳಿಗ್ಗೆ 11 ಗಂಟೆಗೆ ವ್ಯವಹಾರ ಸಲಹಾ ಸಮಿತಿಯ ಸಭೆಯನ್ನು ಸ್ಪೀಕರ್ ನಡೆಸಿದ್ದಾರೆ. ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿಯ ಅರ್ಜುನ್ ರಾಮ್ ಮೇಘವಾಲ್, ಕಾಂಗ್ರೆಸ್ನ ಅಧೀರ್ ರಂಜನ್ ಚೌಧರಿ, ಎಐಎಂಐಎಂನ ಅಸದುದ್ದೀನ್ ಒವೈಸಿ ಭಾಗವಹಿಸಿದ್ದಾರೆ.
ಈ ಬಾರಿ ಕೊರೋನಾವೈರಸ್ ಕಾರಣದಿಂದಾಗಿ ಕಲಾಪದಲ್ಲಿ ಪ್ರಶ್ನೋತ್ತರ ಅವಧಿಯನ್ನು ಮೊಟಕುಗೊಳಿಸಲಾಗಿದೆ. ಇದಕ್ಕೆ ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಈ ಬಾರಿಯ ಅಧಿವೇಶನದಲ್ಲಿ ಇಂಡೋ-ಚೀನಾ ಉದ್ವಿಗ್ನತೆ, ಆರ್ಥಿಕತೆಯ ಕುಸಿತ ಮತ್ತು ಕರೋನವೈರಸ್ ಸಾಂಕ್ರಾಮಿಕವನ್ನು ನಿಭಾಯಿಸುವ ಕುರಿತು ಪ್ರತಿಪಕ್ಷಗಳು ಪ್ರಸ್ತಾಪ ಮಾಡುವ ಸಾಧ್ಯತೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.