ನವದೆಹಲಿ: ಕಳೆದ ಫೆಬ್ರವರಿಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭುಗಿಲೆದ್ದ ಗಲಭೆಯಲ್ಲಿ ಭಾಗಿಯಾಗಿದ್ದ ಅರೋಪದ ಮೇರೆಗೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು)ದ ವಿದ್ಯಾರ್ಥಿ ಉಮರ್ ಖಲೀದ್ನನ್ನು ಭಾನುವಾರ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಗಲಭೆಗೆ ಸಂಬಂಧಿಸಿದ ಮತ್ತೊಂದು ಪ್ರಕರಣದಲ್ಲಿ ದೆಹಲಿ ಪೊಲೀಸರ ವಿಶೇಷ ಘಟಕವು ಈ ಹಿಂದೆ ಉಮರ್ ಖಾಲಿದ್ನನ್ನು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಬಂಧಿಸಿತ್ತು. ದೆಹಲಿ ಪೊಲೀಸರು ಆತನನ್ನು ಬಂಧಿಸುವ ಮೊದಲು ಸುಮಾರು 12 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 23 ರಿಂದ 26 ರವರೆಗೆ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿಯ ವಿರುದ್ಧ ವಾರಗಟ್ಟಲೆ ಪ್ರತಿಭಟನೆ ನಡೆದ ನಂತರ ಗಲಭೆಗಳು ಭುಗಿಲೆದ್ದವು.
ಗಲಭೆಯಲ್ಲಿ ದೆಹಲಿ ಪೊಲೀಸರು ಸಿಪಿಐ (ಎಂ) ನಾಯಕ ಸೀತಾರಾಮ್ ಯೆಚೂರಿ ಮತ್ತು ಸ್ವರಾಜ್ ಅಭಿಯಾನ್ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರನ್ನು ಕೂಡ ಹೆಸರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.