ಲಕ್ನೋ: ಮುಂದಿನ ಮೂರು ದಿನಗಳಲ್ಲಿ ಯುಪಿ ವಿಶೇಷ ಭದ್ರತಾ ಪಡೆ (ಯುಪಿಎಸ್ಎಸ್ಎಫ್)ಯ ರಚನೆಗೆ ನೀಲನಕ್ಷೆ ಸಿದ್ಧಪಡಿಸುವಂತೆ ಉತ್ತರ ಪ್ರದೇಶ (ಯುಪಿ) ಸರ್ಕಾರ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದೆ ಎಂದು ಮೂಲಗಳು ವರದಿ ಮಾಡಿವೆ.
ಪಡೆಯ ರಚನೆಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ ಹದಿನೈದು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಈ ಪಡೆಯು ರಚನೆಯ ಮೊದಲ ಹಂತದಲ್ಲಿ ಒಟ್ಟು 9,919 ಸಿಬ್ಬಂದಿಗಳನ್ನು ಹೊಂದಿರುತ್ತದೆ. ಇದನ್ನು ಮೂರು ತಿಂಗಳಲ್ಲಿ ಕಾರ್ಯಗತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.
ಈ ಪಡೆ ಪ್ರಧಾನ ಕಚೇರಿಯನ್ನು ಲಕ್ನೋದಲ್ಲಿ ಹೊಂದಿರುತ್ತದೆ ಮತ್ತು ಆರಂಭದಲ್ಲಿ ಒಟ್ಟು ಐದು ಬೆಟಾಲಿಯನ್ಗಳನ್ನು ಹೊಂದಿರುತ್ತದೆ. ಮೊದಲ ಹಂತದಲ್ಲಿ ಒಟ್ಟು 9,919 ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ, ಇದರ ನಂತರ ಇನ್ನೂ 1,913 ಹುದ್ದೆಗಳನ್ನು ರಚಿಸಲಾಗುತ್ತದೆ ಎನ್ನಲಾಗಿದೆ.
ಯುಪಿಎಸ್ಎಸ್ಎಫ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಾದರಿಯಲ್ಲಿ ಸೇವೆ ಸಲ್ಲಿಸುತ್ತದೆ ಮತ್ತು ಪ್ರಮುಖ ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಮತ್ತು ಕೈಗಾರಿಕಾ ಸಂಸ್ಥೆಗಳನ್ನು ಭದ್ರಪಡಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ. ಇದನ್ನು ಮೆಟ್ರೋ ರೈಲು, ವಿಮಾನ ನಿಲ್ದಾಣಗಳು, ಕೈಗಾರಿಕಾ ಸಂಸ್ಥೆಗಳು, ನ್ಯಾಯಾಲಯಗಳು, ಧಾರ್ಮಿಕ ಸ್ಥಳಗಳು, ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳಲ್ಲಿ ನಿಯೋಜಿಸಲಾಗುತ್ತದೆ ಎನ್ನಲಾಗಿದೆ.
ಈ ವಿಶೇಷ ಪಡೆಯ ರಚನೆಯನ್ನು ಮೊದಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜೂನ್ 26 ರಂದು ಘೋಷಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.