ವಾಷಿಂಗ್ಟನ್: ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿ (ECOSOC)ಯಾದ ʼಮಹಿಳೆಯರ ಸ್ಥಿತಿಗತಿ ಆಯೋಗʼದ ಸದಸ್ಯನಾಗಿ ಭಾರತವನ್ನು ಆಯ್ಕೆ ಮಾಡಲಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ. ಎಸ್. ತಿರುಮೂರ್ತಿ ಸೋಮವಾರ ಮಾಹಿತಿ ನೀಡಿದ್ದಾರೆ.
“ಭಾರತವು ಪ್ರತಿಷ್ಠಿತ ECOSOC ಮಂಡಳಿಯಲ್ಲಿ ಸ್ಥಾನವನ್ನು ಗೆದ್ದಿದೆ. ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯನಾಗಿ ಆಯ್ಕೆಯಾಗಿದೆ. ಇದು ನಮ್ಮ ಎಲ್ಲ ಪ್ರಯತ್ನಗಳಲ್ಲಿ ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಮ್ಮ ಬದ್ಧತೆಯನ್ನು ಪ್ರತಿಪಾದಿಸುವ ಅನುಮೋದನೆಯಾಗಿದೆ. ಸದಸ್ಯ ರಾಷ್ಟ್ರಗಳ ಬೆಂಬಲಕ್ಕೆ ಧನ್ಯವಾದಗಳು” ಎಂದಿದ್ದಾರೆ.
ಭಾರತ, ಅಫ್ಘಾನಿಸ್ಥಾನ ಮತ್ತು ಚೀನಾ ಮಹಿಳೆಯರ ಸ್ಥಿತಿಗತಿ ಆಯೋಗದ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. 54 ಸದಸ್ಯರಲ್ಲಿ ಭಾರತ ಮತ್ತು ಅಫ್ಘಾನಿಸ್ಥಾನ ಮತದಾನವನ್ನು ಗೆದ್ದವು. ಚೀನಾ ಸೋಲು ಅನುಭವಿಸಿದೆ. ಚೀನಾಕ್ಕೆ ಅರ್ಧದಷ್ಟು ಮತ ಪಡೆಯಲೂ ಸಾಧ್ಯವಾಗಿಲ್ಲ.
ಭಾರತವು 2021 ರಿಂದ 2025 ರವರೆಗೆ ನಾಲ್ಕು ವರ್ಷಗಳ ಕಾಲ ಮಹಿಳೆಯರ ಸ್ಥಿತಿಗತಿಗಳ ಕುರಿತ ಯುನೈಟೆಡ್ ನೇಷನ್ಸ್ ಆಯೋಗದ ಸದಸ್ಯನಾಗಲಿದೆ.
India wins seat in prestigious #ECOSOC body!
India elected Member of Commission on Status of Women #CSW. It’s a ringing endorsement of our commitment to promote gender equality and women’s empowerment in all our endeavours.
We thank member states for their support. @MEAIndia pic.twitter.com/C7cKrMxzOV
— PR UN Tirumurti (@ambtstirumurti) September 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.