ನವದೆಹಲಿ: ದೇಶದಲ್ಲಿ ಕೋವಿಡ್-19 ರೋಗಿಗಳ ಚೇತರಿಕೆಯ ಪ್ರಮಾಣವು 78.28% ತಲುಪಿದೆ. ಒಟ್ಟಾರೆಯಾಗಿ,ಕಳೆದ 24 ಗಂಟೆಗಳಲ್ಲಿ 79,292 ಕೋವಿಡ್ ರೋಗಿಗಳು ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಒಟ್ಟು ಚೇತರಿಸಿಕೊಂಡ ರೋಗಿಗಳ ಸಂಖ್ಯೆ 38,59,399ಗೆ ತಲುಪಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಚೇತರಿಕೆಯ ನಿರಂತರ ಹೆಚ್ಚಳವು ದೇಶದ ಸಕ್ರಿಯ ಪ್ರಕರಣಗಳನ್ನು ಕಡಿಮೆಯಾಗಿಸಿದೆ ಮತ್ತು ಒಟ್ಟು ಪ್ರಕರಣಗಳಲ್ಲಿ ಪ್ರಸ್ತುತ ಪಾಸಿಟಿವ್ ಪ್ರಕರಣಗಳು ಕೇವಲ ಶೇ.20.08 ಮಾತ್ರ ಇದೆ.
‘ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್’ ವಿಧಾನದ ಪರಿಣಾಮಕಾರಿ ಅನುಷ್ಠಾನವು ಹೆಚ್ಚಿನ ಚೇತರಿಕೆ ಮತ್ತು ಕಡಿಮೆ ಮರಣಕ್ಕೆ ಕಾರಣವಾಗಿದೆ. ಪ್ರಸ್ತುತ, ಭಾರತದ ಮರಣ ಪ್ರಕರಣಗಳ ಪ್ರಮಾಣವು ಶೇಕಡಾ 1.64 ರಷ್ಟಿದೆ.
ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,90,061 ಆಗಿದೆ.
ಕಳೆದ 24 ಗಂಟೆಗಳಲ್ಲಿ 1,054 ಸಾವುಗಳು ಸಂಭವಿಸಿದ್ದು, ಒಟ್ಟು ಸಾವು 80,776 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ಕಳೆದ 24 ಗಂಟೆಗಳಲ್ಲಿ 10,72,845 ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ ದೇಶಾದ್ಯಂತ 5.83 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.