ಬೆಂಗಳೂರು: ನೂತನ ರಾಷ್ಟ್ರೀಯ ನೀತಿ 2020 ದೇಶದೆಲ್ಲೆಡೆ ಜಾರಿಯಾದ ಬಳಿಕ ಜ್ಞಾನದ ವಿಚಾರದಲ್ಲಿ ಭಾರತ ಸೂಪರ್ ಪವರ್ ದೇಶವಾಗಿ ಹೊರಹೊಮ್ಮಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ತಿಳಿಸಿದ್ದಾರೆ.
ನೂತನ ಶಿಕ್ಷಣ ನೀತಿ ಜಾರಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜು, ಬೆಂಗಳೂರು ಶೈಕ್ಷಣಿಕ ಹಾಗೂ ಸಾಮಾಜಿಕ ಅಧ್ಯಯನ ಕೇಂದ್ರ ನಡೆಸಿದ ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಹೊಸ ನೀತಿಯಲ್ಲಿ ಶಿಕ್ಷಣ ಹೇಗಿರಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದರ ಕುರಿತಂತೆ ಕೇಂದ್ರ ಸರ್ಕಾರ ಸಂಪೂರ್ಣ ರೂಪುರೇಶೆ ಹಾಕಿಕೊಟ್ಟಿದೆ. ಈ ನೀತಿಯ ಜಾರಿಯಿಂದಾಗಿ ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ಆಗುವುದರಲ್ಲಿ ಸಂದೇಹ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಈ ನೀತಿಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಲಾಗಿದೆ. ಬಹು ವಿಷಯಗಳ ಕಲಿಕೆಯ ಜೊತೆಗೆ, ವಿದ್ಯಾರ್ಥಿಗಳಿಗೆ ಇಲ್ಲಿ ಆಯ್ಕೆಯೂ ಇದೆ. ಇದು ಪ್ರತಿಭೆಗಳು ಅರಳುವುದಕ್ಕೂ ಸಹಾಯಕವಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಹೊಸ ನೀತಿ ಜಾರಿಯಲ್ಲಿ ಎಲ್ಲರೂ ಕೈಜೋಡಿಸಿದಾಗ ಪರಿಣಾಮಕಾರಿ ಬದಲಾವಣೆ ಸಾಧ್ಯ ಎಂದು ಅಶ್ವತ್ಥ್ ನಾರಾಯಣ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Addressed the Virtual National Conference on #NEP2020: A Transformative Educational Policy for Aspirational India, organised by Bengaluru North University & Kristu Jayanti College with Prof MK Sridhar, Prof TD Kemparaju & Rev. Dr Augustine George.@Cess_Bengaluru
1/2 pic.twitter.com/Xzj7OYM8Ei
— Dr. Ashwathnarayan C. N. (@drashwathcn) September 15, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.