ಬೆಂಗಳೂರು: 2020-25ರ ಹೊಸ ಪ್ರವಾಸೋದ್ಯಮ ನೀತಿಯನ್ನು ಪ್ರವಾಸೋದ್ಯಮ ದಿನವಾದ ಸೆ. 27 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನಾವರಣಗೊಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ನೀತಿಯನ್ನು ಕ್ಯಾಬಿನೆಟ್ ಅನುಮೋದಿಸಿರುವುದಾಗಿಯೂ ತಿಳಿದು ಬಂದಿದೆ. ಈ ಹೊಸ ಕರಡು ನೀತಿಯು ಇತ್ತೀಚೆಗಷ್ಟೇ ಅಂತಿಮಗೊಂಡಿದ್ದು, ದೇಶೀಯ ಮತ್ತು ವಿದೇಶೀ ಪ್ರವಾಸಿಗರನ್ನು ಆಕರ್ಷಣೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ.
ಈ ಹೊಸ ನೀತಿಯು ವನ್ಯಜೀವಿ, ಪರಂಪರೆ, ಸಂಸ್ಕೃತಿ, ಆಧ್ಯಾತ್ಮಿಕ, ಸಾಂಸ್ಕೃತಿಕ, ಸಾಹಸ, ಕರಾವಳಿ, ಪ್ರಕೃತಿ, ಆರೋಗ್ಯ, ಕೃಷಿ ಮೊದಲಾದ ಇನ್ನೂ ಅನೇಕ ವಿಚಾರಗಳನ್ನು ಒಳಗೊಂಡಿರುವುದಾಗಿಯೂ ಮೂಲಗಳು ತಿಳಿಸಿವೆ. ಜೊತೆಗೆ ಪ್ರವಾಸೋದ್ಯಮ ಚೇತರಿಕೆಯನ್ನು ಉತ್ತೇಜಿಸುವ ಎಲ್ಲಾ ಅಂಶಗಳನ್ನು ಒಳಗೊಂಡಿದೆ. ಎಲ್ಲಾ ರೀತಿಯ ಪ್ರವಾಸೋದ್ಯಮಕ್ಕೂ ಈ ಹೊಸ ನೀತಿ ಉತ್ತೇಜನ ನೀಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.