ನವದೆಹಲಿ: ಭಾರತದ ಅತ್ಯಂತ ಯಶಸ್ವಿ ಪ್ರಧಾನಮಂತ್ರಿ ಎಂದು ಕರೆಯಲ್ಪಡುವ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ತಮ್ಮ 70ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಗಣ್ಯಾತಿಗಣ್ಯರು ಮೋದಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಭಾರತದ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ ಇತರರು ಕೂಡ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳಿಗೆ ಶುಭ ಹಾರೈಸಿದ್ದಾರೆ.
ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 17, 1950 ರಂದು ಗುಜರಾತ್ನ ವಡ್ನಗರದಲ್ಲಿ ಜನಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪ್ರಧಾನಿ ಮೋದಿಯವರ 70 ನೇ ಹುಟ್ಟುಹಬ್ಬವನ್ನು ಸುಂದರವಾದ ಮರಳು ಕಲಾಕೃತಿಯೊಂದಿಗೆ ಆಚರಿಸಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪಿಎಂ ಮೋದಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದು, “ನಿಮ್ಮೊಂದಿಗೆ ರಚನಾತ್ಮಕ ಸಂವಾದವನ್ನು ಮುಂದುವರಿಸಲು ಮತ್ತು ದ್ವಿಪಕ್ಷೀಯ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದಿದ್ದಾರೆ.
ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು 70 ನೇ ಜನ್ಮದಿನದಂದು ಪ್ರಧಾನಿ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ. “ಜನ್ಮದಿನದ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ನಾನು ಬಯಸುತ್ತೇನೆ. ನಮ್ಮ ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದು ಓಲಿ ಹೇಳಿದ್ದಾರೆ.
ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ರಕ್ತದಾನ ಶಿಬಿರ, ಹಣ್ಣು-ಹಂಪಲು ವಿತರಣೆ ಸೇರಿದಂತೆ ಹಲವಾರು ಸಮಾಜ ಸೇವಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
Wishing our beloved PM @narendramodi Ji on his 70th birthday. My SandArt with message The Pioneer of #AtmaNirbharBharat at Puri beach, Odisha. pic.twitter.com/u8w4xN7naw
— Sudarsan Pattnaik (@sudarsansand) September 17, 2020
प्रधानमंत्री @narendramodi जी को जन्मदिन की हार्दिक बधाई और शुभकामनाएं। आपने भारत के जीवन-मूल्यों व लोकतांत्रिक परंपरा में निष्ठा का आदर्श प्रस्तुत किया है। मेरी शुभेच्छा और प्रार्थना है कि ईश्वर आपको सदा स्वस्थ व सानन्द रखे तथा राष्ट्र को आपकी अमूल्य सेवाएं प्राप्त होती रहें।
— President of India (@rashtrapatibhvn) September 17, 2020
राष्ट्रसेवा और गरीब कल्याण के प्रति समर्पित देश के सर्वप्रिय नेता प्रधानमंत्री श्री @narendramodi जी को जन्मदिन की शुभकामनाएं।
मोदी जी के रूप में देश को एक ऐसा नेतृत्व मिला है जिसने लोक-कल्याणकारी नीतियों से वंचित वर्ग को विकास की मुख्यधारा से जोड़ा और एक मजबूत भारत की नींव रखी।
— Amit Shah (@AmitShah) September 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.