ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರನ್ನು ಮಟ್ಟ ಹಾಕುವ ಕಾರ್ಯವನ್ನು ಭದ್ರತಾ ಪಡೆಗಳು ತೀವ್ರಗೊಳಿಸಿವೆ. ಪ್ರತಿನಿತ್ಯ ಅಲ್ಲಿ ಕಾರ್ಯಾಚರಣೆಗಳು ನಡೆಯುತ್ತಿದ್ದು, ದಿನಕ್ಕೊಂದರಂತೆ ಅಲ್ಲಿ ಉಗ್ರರ ಹೆಣಗಳು ಬೀಳುತ್ತಿದೆ. ಗುರುವಾರ ಶ್ರೀನಗರದ ಬಟಮಾಲೂನಲ್ಲಿ ಎನ್ಕೌಂಟರ್ ನಡೆಸಲಾಗಿದ್ದು, ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದುಕೊಂಡು ಕಾರ್ಯಾಚರಣೆಯನ್ನು ಆರಂಭಿಸಿದವು, ಈ ವೇಳೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭಯೋತ್ಪಾದಕರು ಅಡಗಿರುವ ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾವಣೆಯಾಗುತ್ತಿದ್ದಂತೆ ಉಗ್ರರು ಭಾರಿ ಪ್ರಮಾಣದಲ್ಲಿ ಗುಂಡು ಹಾರಿಸಲು ಆರಂಭಿಸಿದ್ದಾರೆ, ಅದು ಎನ್ಕೌಂಟರ್ ಅನ್ನು ಪ್ರಚೋದಿಸಿತು ಎಂದು ಮೂಲಗಳು ತಿಳಿಸಿವೆ.
ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಟ್ವಿಟ್ ಮೂಲಕ ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿಯನ್ನು ನೀಡಿದ್ದಾರೆ.
ಹತರಾದ ಭಯೋತ್ಪಾದಕರ ಗುರುತನ್ನು ಭದ್ರತಾ ಪಡೆಗಳು ಇನ್ನೂ ಬಹಿರಂಗಪಡಿಸಿಲ್ಲ.
ಎನ್ಕೌಂಟರ್ ಸಮಯದಲ್ಲಿ ಸಿಆರ್ಪಿಎಫ್ನ ಉಪ ಕಮಾಂಡೆಂಟ್ ಕೂಡ ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ವಿನಿಮಯದ ಸಮಯದಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಮೂಲಗಳು ವರದಿ ಮಾಡಿವೆ.
#SrinagarEncounterUpdate: 02 more #unidentified #terrorists killed (total 03). Search going on. Further details shall follow. @JmuKmrPolice https://t.co/jM8sq21bFn
— Kashmir Zone Police (@KashmirPolice) September 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.