ಕಲ್ಬುರ್ಗಿ: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಗೆ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಪೊಲೀಸ್ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನ ಎಚ್.ಎಸ್.ಆರ್. ಲೇಔಟ್ನಲ್ಲಿ ನಿವೇಶನವನ್ನು ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಈ ಆದೇಶ ಪ್ರತಿಯನ್ನು ಇದೇ ಸಂದರ್ಭದಲ್ಲಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರಿಗೆ ಮುಖ್ಯಮಂತ್ರಿಗಳು ಹಸ್ತಾಂತರ ಮಾಡಿದರು. ವಿವೇಚನಾ ನಿಧಿಯ ಹಣದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಅದರಂತೆ 3 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಬುರ್ಗಿ, ಬೀದರ್ ಜಿಲ್ಲೆಗೆ ಪೂರಕವಾಗುವಂತೆ ಕೃಷಿ ಮತ್ತು 10 ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ಮುಂದಿನ ನಾಲ್ಕು ತಿಂಗಳಲ್ಲಿ ಬಸವ ಕಲ್ಯಾಣ ಪ್ರಾಧಿಕಾರದ ಆಶ್ರಯದಲ್ಲಿ ಅನುಭವ ಮಂಟಪ ಕಾರ್ಯಾರಂಭ, ಕಲ್ಬುರ್ಗಿಯ ರೈಲ್ವೆ ವಿಭಾಗೀಯ ಕಛೇರಿ ಸ್ಥಾಪನೆಯ ಬಗೆಗೂ ಕೇಂದ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಕಲ್ಬುರ್ಗಿಯಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಶಾಖೆಯ ಸ್ವಂತ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದರು. 33.37 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಕಲಬುರ್ಗಿಗೆ ಕುಡಿಯುವ ನೀರು ಪೂರೈಸುವ 600 ಕೋಟಿ ರೂಪಾಯಿ ಮೊತ್ತದ ಯೋಜನೆಗೂ ಅವರು ಚಾಲನೆ ನೀಡಿದರು. ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘಕ್ಕೆ 300 ಕೋಟಿ ರೂಪಾಯಿ ಅನುದಾನ ನೀಡಲು ಮುಂದಾಗಿದ್ದು, 100 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ @BSYBJP ರವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. (1/3)#ಕಲ್ಯಾಣಕರ್ನಾಟಕ pic.twitter.com/8wPeuZVmS3
— CM of Karnataka (@CMofKarnataka) September 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.