ಬೆಂಗಳೂರು: ಇತ್ತೀಚೆಗಷ್ಟೇ ಭಾರತೀಯ ಜನತಾ ಪಕ್ಷದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಅಶೋಕ್ ಗಸ್ತಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ.
ರಾಯಚೂರು ಮೂಲದವರಾದ ಗಸ್ತಿಅವರು ಸಂಘ ಪರಿಹಾರದ ಹಿನ್ನೆಲೆಯುಳ್ಳವರು. ಕಳೆದ 15 ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಆರಂಭಗೊಂಡ ಸಂಸತ್ ಕಲಾಪದಲ್ಲಿಯೂ ಅವರು ಭಾಗಿಯಾಗಲು ಅಸಾಧ್ಯವಾಗಿತ್ತು. ತಪಾಸಣೆ ವೇಳೆ ಕೊರೋನಾ ಪಾಸಿಟಿವ್ ಬಂದಿದ್ದ ಕಾರಣ ಅವರು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.
ಅವರ ನಿಧನಕ್ಕೆ ಅಮಿತ್ ಶಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
Shocked and pained on the untimely demise of Rajya Sabha MP and senior BJP leader from Karnataka, Shri Ashok Gasti ji. Over the years, he served the organization & nation in multiple roles. My deepest condolences are with his family in this hour of grief. Om Shanti Shanti Shanti
— Amit Shah (@AmitShah) September 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.