ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು ಪ್ಲಾಸ್ಮಾ ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಪ್ಲಾಸ್ಮಾ ದಾನ ಮಾಡಿದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸೇವೆಯೇ ಸಂಘಟನೆ ಎನ್ನುವ ಪಕ್ಷದ ಸಿದ್ಧಾಂತದಂತೆ ಸೆಪ್ಟೆಂಬರ್ 14 ರಿಂದ 20 ರ ತನಕ ರಾಷ್ಟ್ರದಲ್ಲಿ ಸೇವಾ ಸಪ್ತಾಹ ಆಚರಿಸಲಾಗುತ್ತದೆ. ಕೋವಿಡ್ 19 ನೆಗೆಟಿವ್ ಬಂದು ಗುಣಮುಖರಾಗಿರುವ ವ್ಯಕ್ತಿಗಳ ಪ್ಲಾಸ್ಮಾವನ್ನು ಕೋವಿಡ್ 19 ಸೋಂಕಿತರಿಗೆ ನೀಡುವುದರಿಂದ ಸೋಂಕಿತರು ಶೀಘ್ರ ಗುಣಮುಖರಾಗುತ್ತಾರೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಗುರುವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.
ಪ್ಲಾಸ್ಮಾ ದಾನ ಮಾಡುವ ಮೊದಲು ವೈದ್ಯರು ಪ್ಲಾಸ್ಮಾ ದಾನ ಮಾಡುವ ವ್ಯಕ್ತಿಯನ್ನು ಪರೀಕ್ಷಿಸಿ ಒಪ್ಪಿಗೆ ನೀಡಬೇಕಾಗುತ್ತದೆ. ಡಾ.ಭರತ್ ಶೆಟ್ಟಿಯವರು ಬುಧವಾರ ಈ ಪ್ರಕ್ರಿಯೆಗೆ ಒಳಗಾಗಿದ್ದು ವೈದ್ಯರು ಪ್ಲಾಸ್ಮಾ ದಾನ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ. ಈ ಮೂಲಕ ಪ್ಲಾಸ್ಮಾ ದಾನ ಮಾಡಿದ ರಾಜ್ಯದ ಮೊದಲ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶಾಸಕರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.