ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಗುರುವಾರ ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿವಿಧ ರೀತಿಯಲ್ಲಿ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಪ್ರಧಾನಿಯವರು ಜನರ ಬಳಿ ತಮ್ಮ ಹುಟ್ಟುಹಬ್ಬದ ಉಡುಗೊರೆಯನ್ನು ಕೂಡ ಕೇಳಿದ್ದಾರೆ.
ಕೊರೋನಾದಿಂದ ರಕ್ಷಣೆ ಪಡೆಯಲು ಬೇಕಾದ ಅಗತ್ಯ ಕ್ರಮಗಳನ್ನು ಅನುಸರಿಸುವುದೇ ನೀವು ನನಗೆ ನೀಡುವ ಉಡುಗೊರೆ ಎಂಬುದಾಗಿ ಮೋದಿ ಹೇಳಿದ್ದಾರೆ.
ಗುರುವಾರ ತಡರಾತ್ರಿ ಟ್ವೀಟ್ ಮಾಡಿರುವ ಮೋದಿಯವರು, “ಅನೇಕ ಮಂದಿ ಜನ್ಮದಿನದ ಉಡುಗೊರೆ ಏನು ಬೇಕು ಎಂದು ನನ್ನಲ್ಲಿ ಕೇಳುತ್ತಿದ್ದಾರೆ. ಹೀಗಾಗಿ ನನಗೇನು ಬೇಕು ಎಂಬುದನ್ನು ನಾನು ಹೇಳುತ್ತೇನೆ. ನಿರಂತರವಾಗಿ ಮಾಸ್ಕ್ ಧರಿಸಿ ಮತ್ತು ಸಮರ್ಪಕವಾದ ರೀತಿಯಲ್ಲಿ ಧರಿಸಿ. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ. ಎರಡು ಗಜಗಳ ಅಂತರವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಿ. ಜನನಿಬಿಡ ಪ್ರದೇಶಗಳಿಗೆ ಹೋಗುವುದನ್ನು ತಪ್ಪಿಸಿ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಈ ಭೂಮಿಯನ್ನು ಆರೋಗ್ಯ ಪೂರ್ಣಗೊಳಿಸಿ” ಎಂದು ಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶ ಮಾತ್ರವಲ್ಲ ಜಗತ್ತಿನ ವಿವಿಧ ಕಡೆಗಳಿಂದ ಶುಭಾಶಯಗಳ ಮಹಾಪೂರ ಹರಿದು ಬಂದಿದೆ.
ಶುಭಾಶಯಗಳಿಗೆ ಧನ್ಯವಾದಗಳನ್ನು ಅರ್ಪಣೆ ಮಾಡಿರುವ ಮೋದಿ, “ಭಾರತ ಮತ್ತು ಜಗತ್ತಿನಾದ್ಯಂತದ ಜನರು ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ನಾನು ಆಭಾರಿಯಾಗಿದ್ದೇನೆ. ಈ ಶುಭಾಶಯಗಳು ದೇಶದ ಜನರ ಬದುಕನ್ನು ಇನ್ನಷ್ಟು ಸುಧಾರಣೆ ಗೊಳಿಸುವ ನಿಟ್ಟಿನಲ್ಲಿ ಸೇವೆಸಲ್ಲಿಸಲು ಮತ್ತು ಕಾರ್ಯನಿರ್ವಹಿಸಲು ನನಗೆ ಶಕ್ತಿ ನೀಡುತ್ತದೆ” ಎಂದಿದ್ದಾರೆ.
Since many have asked, what is it that I want for my birthday, here is what I seek right now:
Keep wearing a mask and wear it properly.
Follow social distancing. Remember ‘Do Gaj Ki Doori.’
Avoid crowded spaces.
Improve your immunity.
Let us make our planet healthy.
— Narendra Modi (@narendramodi) September 17, 2020
People from all over India, from all over the world have shared their kind wishes. I am grateful to each and every person who has greeted me. These greetings give me strength to serve and work towards improving the lives of my fellow citizens.
— Narendra Modi (@narendramodi) September 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.