ನವದೆಹಲಿ: ನಿನ್ನೆಯಷ್ಟೇ ನವದೆಹಲಿ ಪ್ರವಾಸಕ್ಕೆ ತೆರಳಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಇಂದು ಅಲ್ಲಿನ ಕರ್ನಾಟಕ ಭವನ-1 ಕಾವೇರಿ ಕಟ್ಟಡದ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.
ಈ ಕಾಮಗಾರಿಯು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ವತಿಯಿಂದ ಈ ಕಾಮಗಾರಿ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಅಧಿಕೃತ ಚಾಲನೆ ನೀಡಿದರು. ರಾಜ್ಯದಿಂದ ನವದೆಹಲಿಗೆ ತೆರಳುವ ಗಣ್ಯರ ವಾಸ್ತವ್ಯದ ಅನುಕೂಲಕ್ಕಾಗಿ ಸುಮಾರು 87 ಕೋಟಿ ರೂ. ಗಳಲ್ಲಿ ಕಾವೇರಿ ಕಟ್ಟಡ ನಿರ್ಮಾಣವಾಗುತ್ತಿದೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪ್ರಲ್ಹಾದ್ ಜೋಷಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.