ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ 508 ಕಿ.ಮೀ ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆ ‘ಬುಲೆಟ್ ಟ್ರೈನ್ ಪ್ರಾಜೆಕ್ಟ್’ ನಿರ್ಮಾಣ ಹಂತದಲ್ಲಿ 90,000 ಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ವರದಿಗಳು ತಿಳಿಸಿವೆ.
ರಾಷ್ಟ್ರೀಯ ಹೈ ಸ್ಪೀಡ್ ರೈಲ್ ಕಾರ್ಪೊರೇಶನ್ ಲಿಮಿಟೆಡ್ (ಎನ್ಎಚ್ಎಸ್ಆರ್ಸಿಎಲ್) ವಕ್ತಾರ ಸುಷ್ಮಾ ಗೌರ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, “ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಯೋಜನೆಯು ಯೋಜನೆಯ ನಿರ್ಮಾಣ ಹಂತದಲ್ಲಿ ವಿವಿಧ ವಿಭಾಗಗಳಲ್ಲಿ 90,000 ಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದ್ದು, ಇದು ದೇಶದ ಬೆಳವಣಿಗೆ ಮತ್ತು ಸಮೃದ್ಧಿಗೆ ಕಾರಣವಾಗುತ್ತದೆ ” ಎಂದಿದ್ದಾರೆ.
ನಿರ್ಮಾಣಕ್ಕೆ ಸಂಬಂಧಿಸಿದ ವಿವಿಧ ಚಟುವಟಿಕೆಗಳಿಗೆ 51,000 ಕ್ಕೂ ಹೆಚ್ಚು ತಂತ್ರಜ್ಞರು, ನುರಿತ ಮತ್ತು ಕೌಶಲ್ಯರಹಿತ ಕಾರ್ಯಪಡೆಯ ಅಗತ್ಯವಿರುತ್ತದೆ ಎಂದು ಅವರು ಹೇಳಿದ್ದಾರೆ.
“ಎನ್ಎಚ್ಎಸ್ಆರ್ಸಿಎಲ್ ಈಗಾಗಲೇ ಕೌಶಲ್ಯರಹಿತ ಕಾರ್ಮಿಕರಿಗೆ ಟೈಲ್ ಹಾಕುವುದು, ನಿರ್ಮಾಣ, ವಿದ್ಯುತ್ ಕೆಲಸಗಳು, ಕಾಂಕ್ರೀಟಿಂಗ್, ಪ್ಲ್ಯಾಸ್ಟರಿಂಗ್ ಮುಂತಾದ ವಿವಿಧ ನಿರ್ಮಾಣ-ಸಂಬಂಧಿತ ವಿಭಾಗಗಳಲ್ಲಿ ತರಬೇತಿ ನೀಡುವ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ, ಇದು ಅವರ ಉದ್ಯೋಗಾವಕಾಶ ಮತ್ತು ಉತ್ತಮ ಗಳಿಕೆಯ ಸಾಧ್ಯತೆಗಳನ್ನು ಸುಧಾರಿಸುತ್ತದೆ” ಎಂದು ಅವರು ಹೇಳಿದರು.
ಟ್ರ್ಯಾಕ್ ಹಾಕಲು ಅಗತ್ಯವಾದ ವಿಶೇಷ ತರಬೇತಿಯನ್ನು ಗುತ್ತಿಗೆದಾರ ನೌಕರರಿಗೆ ನೀಡಲು ಎನ್ಎಚ್ಎಸ್ಆರ್ಸಿಎಲ್ ವ್ಯವಸ್ಥೆ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.
“ಬುಲೆಟ್ ರೈಲು ಯೋಜನೆಯ ನಿರ್ಮಾಣ ಹಂತದಲ್ಲಿ 34,000 ಕ್ಕೂ ಹೆಚ್ಚು ಪರೋಕ್ಷ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.