
ನವದೆಹಲಿ: ಗೂಢಚರ್ಯೆ ಕಾರ್ಯದಲ್ಲಿ ಶಾಮೀಲಾದ ಹವ್ಯಾಸಿ ಪತ್ರಕರ್ತನೋರ್ವನನ್ನು ಬಂಧಿಸಿದ ಬೆನ್ನಲ್ಲೇ ದೆಹಲಿ ಪೊಲೀಸರು ಚೀನಾದ ಮಹಿಳೆ ಮತ್ತು ನೇಪಾಳದ ನಾಗರಿಕನನ್ನು ಬಂಧಿಸಿದೆ.
ರಕ್ಷಣಾ ಇಲಾಖೆಯ ಮಹತ್ವದ ಮಾಹಿತಿಗಳನ್ನು ಚೀನಾಗೆ ರವಾನಿಸುತ್ತಿದ್ದ ಆರೋಪದ ಮೇರೆಗೆ ದೆಹಲಿ ಪೊಲೀಸರು ಸಂಜೀವ್ ಶರ್ಮಾ ಎಂಬ ಪತ್ರಕರ್ತನನ್ನು ಬಂಧಿಸಿದ್ದಾರೆ. ಸೆ. 14 ರಂದು ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕವು ಈತನನ್ನು ಬಂಧನಕ್ಕೆ ಒಳಪಡಿಸಿತ್ತು. ಈತನ ಬಂಧನದ ಬೆನ್ನಲ್ಲೇ ಚೀನಾ ಮತ್ತು ನೇಪಾಳದ ಪ್ರಜೆಗಳನ್ನು ಬಂಧಿಸಲಾಗಿದೆ. ಇವರಿಗೆ ಪತ್ರಕರ್ತನ ನಿಕಟ ಸಂಪರ್ಕವಿತ್ತು ಮತ್ತು ಆತನಿಗೆ ಇವರು ನಕಲಿ ಖಾತೆಗಳ ಮೂಲಕ ದೊಡ್ಡ ಮೊತ್ತದ ಹಣ ಪಾವತಿ ಮಾಡಿದ್ದರು. ಈ ಸಂಬಂಧ ಇದೀಗ ಆ ಇಬ್ಬರು ವಿದೇಶಿ ಪ್ರಜೆಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
’40 ವರ್ಷದ ರಾಜೀವ್ ಶರ್ಮಾ ಪಿತಂಪುರದ ನಿವಾಸಿಯಾಗಿದ್ದು, ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್ಐ), ದಿ ಟ್ರಿಬ್ಯೂನ್ ಮತ್ತು ಸಕಾಲ್ ಟೈಮ್ಸ್ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು. ಇವರು ಇತ್ತೀಚೆಗೆ ಚೀನಾದ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ಗೆ ಲೇಖನವೊಂದನ್ನು ಬರೆದಿದ್ದರು. ಅವರನ್ನು ಸೆ. 14ರಂದು ಅಧಿಕೃತ ಗೋಪ್ಯತಾ ಕಾಯ್ದೆ (ಒಎಸ್ಎ) ಅಡಿ ಬಂಧಿಸಲಾಗಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತರಿಂದ ಮೊಬೈಲ್ಗಳು, ಲ್ಯಾಪ್ಟಾಪ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ರಾಜೀವ್ ಶರ್ಮಾ ಎರಡು ದಶಕಗಳಿಂದ ವಿದೇಶಾಂಗ ವ್ಯವಹಾರಗಳ ಬಗ್ಗೆ ವರದಿ ಮಾಡುತ್ತಿದ್ದನು. ರಕ್ಷಣಾ ಇಲಾಖೆಗೆ ಬೇಕಾದ ಮಾಹಿತಿಗಳು ಆತನಲ್ಲಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಸಂಬಂಧ ಸೂಕ್ತ ಕಾಲಕ್ಕೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



