ಬೆಂಗಳೂರು: ಬಂಡೀಪುರದ ಟೈಗರ್ ರಿಸರ್ವ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸುಮಾರು 1600 ಕ್ಕೂ ಹೆಚ್ಚು ಆನೆಗಳಿರುವುದಾಗಿ ಮೀಸಲು ಅರಣ್ಯ ಪಡೆಯ ಅಧಿಕಾರಿಗಳು ನಡೆಸಿದ ಆಂತರಿಕ ಸಮೀಕ್ಷೆಯ ವರದಿಯೊಂದರಿಂದ ಬಹಿರಂಗಗೊಂಡಿದೆ.
ಭಾರತದ ಆನೆ ಗಣತಿಯ ಎಲ್ಲಾ ನಿಯಮಾವಳಿಗಳನ್ನು ಈ ಆನೆ ಗಣತಿಯ ಸಂದರ್ಭದಲ್ಲಿ ಅನುಸರಿಸಲಾಗಿದ್ದು, ಲಾಕ್ಡೌನ್ ಮತ್ತು ಅನ್ಲಾಕ್ ಸಂದರ್ಭದಲ್ಲಿ ಈ ಗಣತಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಇಂತಹ ಸಮೀಕ್ಷೆಯೊಂದನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ನಡೆದಿದ್ದ ಅಖಿಲ ಭಾರತ ಸಮೀಕ್ಷೆಯ ಪ್ರಕಾರ ಇಡೀ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ 8,500 ಆನೆಗಳಿವೆ ಎಂದು ತಿಳಿದು ಬಂದಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಟಿಆರ್ ನಿರ್ದೇಶಕ ಟಿ. ಬಾಲಚಂದ್ರ ಅವರು ಖಾಸಗಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಕಳೆದ ನಾಲ್ಕು ತಿಂಗಳಿನಿಂದ ಪ್ರತಿ ತಿಂಗಳಿಗೆ ಎರಡು ದಿನಗಳಂತೆ ಈ ಆಂತರಿಕ ಆನೆ ಸಮೀಕ್ಷೆ ನಡೆಸಲಾಗಿದೆ. ಅರಣ್ಯ ಪ್ರದೇಶ ಆವಾಸ ಸ್ಥಾನವನ್ನು ಹೇಗೆ ಮಾಡಬೇಕೆಂಬ ನಿಟ್ಟಿನಲ್ಲಿ ಈ ಸಮೀಕ್ಷೆ ಮಾಡಿರುವುದಾಗಿಯೂ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.