ಪಾಟ್ನಾ: ಅಗಲಿದ ಜನರ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಬಿಹಾರ ಸರ್ಕಾರ ಕಿಶಾನ್ಗಂಜ್ನಲ್ಲಿನ ಕೃಷಿ ಕಾಲೇಜಿಗೆ ಅವರ ಹೆಸರನ್ನಿಟ್ಟಿದೆ. ಅಲ್ಲದೇ ಕಲಾಂರವರ ಹೆಸರಲ್ಲಿ ವಿಜ್ಞಾನ ನಗರವನ್ನು ಸ್ಥಾಪಿಸುವ ಪ್ರಸ್ತಾವನೆ ಮಾಡಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಒಟ್ಟು 36 ಶಿಫಾರಸ್ಸುಗಳನ್ನು ಮಾಡಲಾಗಿದೆ.
ಕಲಾಂ ವಿಜ್ಞಾನ ಮತ್ತು ಆಧ್ಯಾತ್ಮದ ಸಮ್ಮಿಲನವಾಗಿದ್ದು, ದೇಶದ ಜನರ ಹೃದಯದಲ್ಲಿ ಸದಾ ಜೀವಂತವಾಗಿರುತ್ತಾರೆ. ಜ್ಞಾನ, ವಿಜ್ಞಾನ, ಶಿಕ್ಷಕರಾಗಿ ಅವರು ಸಲ್ಲಿಸಿದ ಕೊಡುಗೆ ಅಪಾರ. ಅವರ ಹೆಸರಲ್ಲಿ ಬಿಹಾರ ರಾಜಧಾನಿ ಪಾಟ್ನಾದಲ್ಲೇ ವಿಜ್ಞಾನ ನಗರವನ್ನು ಸ್ಥಾಪಿಸಲಾಗುತ್ತದೆ ಎಂದು ಸರ್ಕಾರದ ವಕ್ತಾರ ಶಿಶಿರ್ ಕುಮಾರ್ ಸಿನ್ಹಾ ತಿಳಿಸಿದ್ದಾರೆ.
ಬಿಹಾರ ಮತ್ತು ಕಲಾಂಗೆ ಅವಿನಾಭಾವ ಸಂಬಂಧವಿದ್ದು, ಇಲ್ಲಿಗೆ ಸದಾ ಬಂದು ನಮಗೆ ಮಾರ್ಗದರ್ಶನ ನೀಡುತ್ತಿದ್ದರು. ಅವರು ನೀಡಿದ ಮಾರ್ಗದಲ್ಲಿ ನಾವು ನಡೆಯುತ್ತೇವೆ. ಅವರ ಪರಂಪರೆಯ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.