ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯು ಕೊರೋನಾ ಲಾಕ್ಡೌನ್ನಿಂದಾಗಿ ಕಳೆದ ಮೂರು ತಿಂಗಳಿನಿಂದ ಸ್ಥಗಿತಗೊಳಿಸಲಾಗಿದ್ದ ಲಕ್ಷ್ಯ ಮಾತೃ ಆರೋಗ್ಯ ಕಾರ್ಯಕ್ರಮವನ್ನು ಮತ್ತೆ ಆರಂಭ ಮಾಡಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರಿಗೆ ಮತ್ತು ಮಕ್ಕಳ ಆರೋಗ್ಯ ವೃದ್ಧಿಗೆ ಪೂರಕವಾಗುವಂತೆ ಪೌಷ್ಟಿಕ ಆಹಾರಗಳನ್ನು ನೀಡುವುದಕ್ಕೆ ಸಂಬಂಧಿಸಿದಂತೆ ಈ ಯೋಜನೆ ಇದ್ದು, ಇದರಲ್ಲಿ ತಾಯಿ ಮತ್ತು ಶಿಶುವಿಗೆ ಲಕ್ಷ್ಯ ಸರ್ಟಿಫಿಕೇಟ್ ನೀಡಲಾಗುತ್ತದೆ. ಹೆರಿಗೆ, ಬಾಣಂತನದ ಸಂದರ್ಭದಲ್ಲಿ ಶಿಶು ಅಥವಾ ತಾಯಿಯ ಮರಣ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಉತ್ತಮ ಸೇವೆ ನೀಡಲು, ಅಗತ್ಯ ಮೂಲಸೌಕರ್ಯಗಳನ್ನು ನೀಡಲು ಈ ಕಾರ್ಯಕ್ರಮವನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. 2018 ಎಪ್ರಿಲ್ 1 ರಂದು ರಾಜ್ಯದಲ್ಲಿ ಈ ಯೋಜನೆ ಆರಂಭವಾಗಿದ್ದು, 124 ಆಸ್ಪತ್ರೆಗಳಲ್ಲಿ 12 ಆಸ್ಪತ್ರೆಗಳು ಲಕ್ಷ್ಯ ಸರ್ಟಿಫಿಕೇಟ್ ಹೊಂದಿವೆ. ಇನ್ನೂ ಈ ಕಾರ್ಯಕ್ರಮದ ಒಳಗೆ 10 ಆಸ್ಪತ್ರೆಗಳನ್ನು ಸೇರಿಸುವ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.