ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಆಡಳಿತವು ಇಲ್ಲಿಯವರೆಗೆ ಸುಮಾರು 16.79 ಲಕ್ಷ ಜನರಿಗೆ ನಿವಾಸ ಪ್ರಮಾಣಪತ್ರಗಳನ್ನು ನೀಡಿದೆ ಎಂದು ವರದಿಗಳು ತಿಳಿಸಿವೆ.
ನಿನ್ನೆ ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿರುವ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ, ಕೇಂದ್ರಾಡಳಿತದ ಆಡಳಿತವು ಇಲ್ಲಿಯವರೆಗೆ ನಿವಾಸ ಪ್ರಮಾಣಪತ್ರಗಳಿಗಾಗಿ ಒಟ್ಟು 21,13,879 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹೇಳಿದರು.
ಅರ್ಜಿಯೊಂದಿಗೆ ನಿಗದಿತ ದಾಖಲೆಗಳನ್ನು ಜೋಡಿಸದ ಕಾರಣ ಒಟ್ಟು 1,21,630 ಅರ್ಜಿಗಳನ್ನು ಆಡಳಿತ ತಿರಸ್ಕರಿಸಿದೆ ಎಂದು ರೆಡ್ಡಿ ಮಾಹಿತಿ ನೀಡಿದ್ದಾರೆ.
ಹೊಸದಾಗಿ ನೇಮಕಗೊಂಡ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣಪತ್ರಗಳನ್ನು ಅಡೆತಡೆಯಿಲ್ಲದೆ ನೀಡುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದಾರೆ ಎಂದು ಈ ಹಿಂದೆ ವರದಿಯಾಗಿತ್ತು.
ಸಿನ್ಹಾ ಅವರು ಬಾಕಿ ಉಳಿದಿರುವ ಎಲ್ಲಾ ಅರ್ಜಿಗಳನ್ನು 15 ದಿನಗಳ ಅವಧಿಯಲ್ಲಿ ತೆರವುಗೊಳಿಸಬೇಕು ಎಂದು ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.