ನವದೆಹಲಿ: ಲಡಾಖ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸುವ ಸಂಬಂಧ ಭಾರತ ಮತ್ತು ಚೀನಾ ದೇಶಗಳ ಸೇನೆಯ ಹಿರಿಯ ಕಮಾಂಡರ್ಗಳ ನಡುವೆ ಇಂದು ಆರನೇ ಸುತ್ತಿನ ಮಾತುಕತೆ ನಡೆಯಿತು.
ಮೊಲ್ಡೋದಲ್ಲಿ ನಡೆದ ಈ ಮಾತುಕತೆಯ ಸಂದರ್ಭದಲ್ಲಿ ಉದ್ವಿಗ್ನ ಪ್ರದೇಶಗಳಿಂದ ಉಭಯ ದೇಶಗಳು ತಮ್ಮ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವುದು ಸೇರಿದಂತೆ ಐದು ಅಂಶಗಳ ಒಪ್ಪಂದದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಿತು. ಭಾರತ ನಿಯೋಗದ ನೇತೃತ್ವವನ್ನು ಲೆ. ಜ. ಹರೀಂದರ್ ಸಿಂಗ್, ಚೀನಾ ನಿಯೋಗದ ನೇತೃತ್ವವನ್ನು ಕಮಾಂಡರ್ ಮೇ. ಜ. ಲಿಯು ಲಿನ್ ವಹಿಸಿದ್ದರು.
ಈ ಚರ್ಚೆಯ ಕಾರ್ಯಸೂಚಿಯಲ್ಲಿ ಸೆ. 10 ಮಾಸ್ಕೋದಲ್ಲಿ ಆಗಿದ್ದ ಒಪ್ಪಂದದ ಜಾರಿಗೆ ಕಾಲಮಿತಿ ನಿರ್ಣಯ ಮಾಡುವುದು ಪ್ರಧಾನ ಅಂಶವಾಗಿತ್ತು. ಗಡಿಯಲ್ಲಿನ ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಈ ಒಡಂಬಡಿಕೆ ಮಹತ್ವದ ಪಾತ್ರ ವಹಿಸಲಿದೆ. ಈ ಕಮಾಂಡರ್ ಮಟ್ಟದ ಚರ್ಚೆಯಲ್ಲಿ ಇದೇ ಮೊದಲ ಬಾರಿಗೆ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.