ವಾಷಿಂಗ್ಟನ್: ಇನ್ನೇನು ಕೆಲವೇ ಸಮಯದಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ದಕ್ಷಿಣ ಏಷ್ಯಾ ರಾಷ್ಟ್ರಗಳ ಮತದಾರರನ್ನು ಸೆಳೆಯಲು ಅಲ್ಲಿನ ಡೆಮಾಕ್ರಟಿಕ್ ಪಕ್ಷ ಭಾರತದ 14 ಭಾಷೆಗಳಲ್ಲಿ ಪ್ರಚಾರ ಪರಿಕರಗಳನ್ನು ಡಿಜಿಟಲ್ ಜಾಹೀರಾತುಗಳ ಮೂಲಕ ನೀಡಲು ಮುಂದಾಗಿದೆ.
ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ‘ಚಲೋ ಚಲೋ, ಬೈಡನ್ ಕೊ ವೋಟ್ ದೊ’ ಎಂಬ ಹಿಂದಿ ಸಂಗೀತವುಳ್ಳ ಪ್ರಚಾರ ವಿಡಿಯೋ ಒಂದು ಅಮೆರಿಕದಲ್ಲಿ ಈಗಾಗಲೇ ವೈರಲ್ ಆಗಿದ್ದು, ಅನಿವಾಸಿ ಭಾರತೀಯರನ್ನು ಬುಟ್ಟಿಗೆ ಹಾಕಿಕೊಳ್ಳುವ, ತಮ್ಮತ್ತ ಸೆಳೆಯುವ ನಿಟ್ಟಿನಲ್ಲಿ ಡೆಮಾಕ್ರಟಿಕ್ ಪಕ್ಷ ಈ ರೀತಿಯ ಪ್ರಚಾರದ ಗಿಮಿಕ್ಗೆ ಮುಂದಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವ ಡೆಮಾಕ್ರಟಿಕ್ ಪಕ್ಷದ ಚುನಾವಣಾ ಪ್ರಚಾರದ ರಾಷ್ಟ್ರೀಯ ಆರ್ಥಿಕ ಸಮಿತಿ ಸದಸ್ಯ ಅಜಯ್ ಜೈನ್ ಬುಟೋರಿಯಾ, ಈಗಾಗಲೇ ಗ್ರಾಫಿಕ್ಸ್ ಬಳಸಿ ಬೈಡನ್, ಕಮಲಾ ಅವರಿಗೆ ಮತ ಹಾಕುವಂತೆ ಜನರಲ್ಲಿ ಜಾಗೃತಿ ಮೂಡಿಸಲು, ಜಾಹೀರಾತು ಪ್ರಚಾರಕ್ಕೆ ಭರದ ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ. ತಂತ್ರಜ್ಞಾನ ಬಳಕೆ ಮಾಡಿಕೊಂಡು ಮತದಾರರನ್ನು ತಲುಪುವ ಕೆಲಸವನ್ನು ಪಕ್ಷ ಮಾಡುತ್ತಿದೆ. ದಕ್ಷಿಣ ಏಷ್ಯಾ ದೇಶಗಳ ಮತದಾರರಿಗೆ ಮತದಾನ ನಡೆಯುವ ಪ್ರಕ್ರಿಯೆಗಳ ಬಗೆಗೂ ಸೂಕ್ತ ಮಾಹಿತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.