ನವದೆಹಲಿ: ಕೋವಿಡ್ ಒಂದು ದೊಡ್ಡ ಮಟ್ಟದಲ್ಲಿ ಇರುವ ಏಳು ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರ ಜೊತೆ ಪ್ರಧಾನ ಮಂತ್ರಿ ಅವರು ಸೆಪ್ಟೆಂಬರ್ 23 ರಂದು ಉನ್ನತ ಮಟ್ಟದ ವರ್ಚುವಲ್ ಸಭೆ ನಡೆಸಿ ಕೋವಿಡ್ ಪರಿಸ್ಥಿತಿ ಮತ್ತು ಕೋವಿಡ್ ಪ್ರತಿಕ್ರಿಯಾ ಹಾಗು ನಿರ್ವಹಣಾ ಸಿದ್ದತೆಗಳನ್ನು ಪರಾಮರ್ಶಿಸಲಿದ್ದಾರೆ.
ಮಹಾರಾಷ್ಟ್ರ, ಆಂಧ್ರ ಪ್ರದೇಶ, ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ದಿಲ್ಲಿ ಮತ್ತು ಪಂಜಾಬ್ ರಾಜ್ಯಗಳ ಜೊತೆ ಸಭೆ ನಡೆಸಲಿದ್ದಾರೆ.
ದೇಶದ 63% ನಷ್ಟು ಸಕ್ರಿಯ ಪ್ರಕರಣಗಳು ಈ ಏಳು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೇಂದ್ರೀಕೃತಗೊಂಡಿವೆ. ಒಟು ದೃಢೀಕೃತ ಪ್ರಕರಣಗಳಲ್ಲಿ 65.5 % ಪಾಲು ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳದ್ದಾಗಿದೆ ಹಾಗು ಒಟ್ಟು ಸಾವಿನ ಪ್ರಕರಣಗಳಲ್ಲಿ 77% ಪಾಲು ಇವುಗಳದ್ದಾಗಿದೆ. ಇತರ ಐದು ರಾಜ್ಯಗಳ ಜೊತೆ ಪಂಜಾಬ್ ಮತ್ತು ದಿಲ್ಲಿಗಳಲ್ಲಿ ಇತ್ತೀಚೆಗೆ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ವರದಿಯಾಗುತ್ತಿದೆ. ಮಹಾರಾಷ್ಟ್ರ, ಪಂಜಾಬ್ ಮತ್ತು ದಿಲ್ಲಿಗಳಲ್ಲಿ ಸಾವಿನ ದರ/ಪ್ರಮಾಣ ಹೆಚ್ಚುತ್ತಿದೆ. ಇಲ್ಲಿ ಪ್ರಕರಣಗಳಲ್ಲಿ ಮೃತಪಡುವವರ ಪ್ರಮಾಣ (ಸಿ.ಎಫ್.ಆರ್.) 2.0 % ಗೂ ಅಧಿಕವಿದೆ. ಪಂಜಾಬ್ ಮತ್ತು ಉತ್ತರ ಪ್ರದೇಶ ಹೊರತುಪಡಿಸಿದರೆ ಅವುಗಳ ಪಾಸಿಟಿವ್ ಪ್ರಮಾಣವು ರಾಷ್ಟ್ರೀಯ ಸರಾಸರಿಯಾದ 8.52 % ಗಿಂತ ಹೆಚ್ಚಾಗಿದೆ.
ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳ ನಿಕಟ ಮತ್ತು ಸಮರ್ಪಕ ಸಮನ್ವಯದೊಂದಿಗೆ ಕೇಂದ್ರವು ದೇಶದಲ್ಲಿ ಕೋವಿಡ್ ವಿರುದ್ದದ ಹೋರಾಟದ ನೇತೃತ್ವವನ್ನು ವಹಿಸಿಕೊಂಡು ಮುನ್ನಡೆಸುತ್ತಿದೆ. ಆರೋಗ್ಯ ರಕ್ಷಣಾ ವ್ಯವಸ್ಥೆ ಮತ್ತು ವೈದ್ಯಕೀಯ ಮೂಲಸೌಕರ್ಯವನ್ನು ಬಲಪಡಿಸಲು ಅವುಗಳಿಗೆ ಕೇಂದ್ರ ಸರಕಾರವು ಬೆಂಬಲವನ್ನು ನೀಡುತ್ತಿದೆ. ಐ.ಸಿ.ಯು.ಗಳನ್ನು ನಿಭಾಯಿಸುವ ವೈದ್ಯರ ಕ್ಲಿನಿಕಲ್ ನಿರ್ವಹಣಾ ಸಾಮರ್ಥ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ದೆಹಲಿಯ ಏಮ್ಸ್ ಸಹಯೋಗದಲ್ಲಿ ಕೈಗೊಂಡ ಇ-ಐ.ಸಿ.ಯು. ಟೆಲಿ ಸಲಹಾ ವ್ಯವಸ್ಥೆಯ ಮೂಲಕ ಸಾಕಷ್ಟು ಪ್ರಮಾಣದಲ್ಲಿ ಉನ್ನತೀಕರಿಸಲಾಗಿದೆ.
ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಜೊತೆಗಿನ ಉನ್ನತ ಮಟ್ಟದ ಪರಾಮರ್ಶಾ ಸಭೆಯು ಆಸ್ಪತ್ರೆಗಳಲ್ಲಿ ಮತ್ತು ಕೋವಿಡ್ ಆರೋಗ್ಯ ಕೇಂದ್ರ ಸೌಲಭ್ಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ವೈದ್ಯಕೀಯ ಆಮ್ಲಜನಕ ಲಭ್ಯತೆಯನ್ನು ಖಾತ್ರಿಪಡಿಸಿದೆ. ಕೇಂದ್ರವು ನಿಯಮಿತವಾಗಿ ತಂಡಗಳನ್ನು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಬೆಂಬಲಿಸುವುದಕ್ಕಾಗಿ ಕಳುಹಿಸುತ್ತಿದೆ. ಕಂಟೈನ್ಮೆಂಟ್ ನಿಗಾ, ಪರೀಕ್ಷೆ ಮತ್ತು ಪಾಸಿಟಿವ್ ಪ್ರಕರಣಗಳ ದಕ್ಷ ಕ್ಲಿನಿಕಲ್ ನಿರ್ವಹಣೆಯನ್ನು ಕೈಗೊಳ್ಳುವುದಕ್ಕಾಗಿ ಈ ತಂಡಗಳನ್ನು ನಿಯೋಜಿಸಲಾಗುತ್ತಿದೆ. ಕೇಂದ್ರೀಯ ತಂಡಗಳು ಸ್ಥಳೀಯ ಅಧಿಕಾರಿಗಳಿಗೆ ಸಕಾಲದಲ್ಲಿ ರೋಗ ಪತ್ತೆ ಮಾಡುವ ಸವಾಲುಗಳಿಗೆ ಸಂಬಂಧಿಸಿ ಮಾರ್ಗದರ್ಶನ ನೀಡುವುದಲ್ಲದೆ ಅವಶ್ಯ ಅನುಸರಣಾ ಕ್ರಮಗಳ ಬಗ್ಗೆಯೂ ಮಾರ್ಗದರ್ಶನ ಮಾಡುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.