ಬೆಂಗಳೂರು: ಕಳೆದ ಕೆಲ ಸಮಯದ ಹಿಂದೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಗಲಭೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ಐಎ ಆರಂಭ ಮಾಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್ಐಎ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಶಿಫಾರಸ್ಸು ಮತ್ತು ಪೊಲೀಸ್ ರಿಪೋರ್ಟ್ ಅನ್ನು ಆಧರಿಸಿಕೊಂಡು ಈ ಪ್ರಕರಣದ ತನಿಖೆಯನ್ನು ನಡೆಸುವಂತೆ ಎನ್ಐಎ ಗೆ ಕೇಂದ್ರ ಗೃಹಸಚಿವಾಲಯ ಆದೇಶ ನೀಡಿರುವುದಾಗಿಯೂ ತಿಳಿಸಿದೆ. ಈ ಸಂಬಂಧ ತನಿಖಾ ದಳ ಈಗಾಗಲೇ ಎರಡು ಪ್ರತ್ಯೇಕ ಕೇಸುಗಳನ್ನೂ ದಾಖಲು ಮಾಡಿಕೊಂಡಿದ್ದು, ತನಿಖೆ ಆರಂಭ ಮಾಡಿದೆ.
ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಅವರ ಸಂಬಂಧಿ ನವೀನ್ ಎಂಬಾತನ ಫೇಸ್ಬುಕ್ ಪೋಸ್ಟ್ ಒಂದರಿಂದ ಉದ್ವಿಗ್ನಗೊಂಡ ಗುಂಪು ಈ ದಾಂಧಲೆ ನಡೆಸಿದ್ದು ಅಖಂಡ ಶ್ರೀನಿವಾಸ ಅವರ ಮನೆಗೆ ಬೆಂಕಿ ಹಚ್ಚಿತ್ತು. ಜೊತೆಗೆ ಪೊಲೀಸ್ ಸ್ಟೇಷನ್ಗೂ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗೂ ಹಾನಿ ಎಸಗಿದ್ದರು. ಈ ಘಟನೆಯಲ್ಲಿ ಸುಮಾರು 60 ಪೊಲೀಸರು ಗಾಯಗೊಂಡ ಬಗ್ಗೆ ವರದಿಯಾಗಿತ್ತು. ಅಲ್ಲದೆ ಈ ಸಂಬಂಧ ಪೊಲೀಸರು 52 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು. ಜೊತೆಗೆ ಎಸ್ಡಿಪಿಐ ನಾಯಕ ಮುಜಾಮಿಲ್ ಪಾಷಾ ಸೇರಿದಂತೆ ಸುಮಾರು 300 ಕ್ಕೂ ಅಧಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.