ನವದೆಹಲಿ: 2020-21ನೇ ಸಾಲಿನ ಪ್ರಥಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿ ಕುರಿತು ಯುಜಿಸಿಯ ಪರಿಷ್ಕೃತ ಮಾರ್ಗಸೂಚಿಯನ್ನು ಕೇಂದ್ರ ಶಿಕ್ಷಣ ಸಚಿವಾಲಯ ಅಂಗೀಕಾರ ಮಾಡಿದೆ.
ನವೆಂಬರ್ ಒಂದರಿಂದ ತೊಡಗಿದಂತೆ ಮೊದಲ ಸೆಮಿಸ್ಟರ್ ತರಗತಿಗಳು ಆರಂಭವಾಗಲಿರುವುದಾಗಿ ಈ ಮಾರ್ಗಸೂಚಿ ತಿಳಿಸಿದೆ.
ಈ ಸಂಬಂಧ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಟ್ವೀಟ್ ಮಾಡಿದ್ದು, ಕೊರೋನಾ ಸಾಂಕ್ರಾಮಿಕ ಅವಧಿಯನ್ನು ಗಮನದಲ್ಲಿಟ್ಟುಕೊಂಡು ಸಮಿತಿ ಸಲ್ಲಿಸಿರುವ ವರದಿಯನ್ನು ಆಯೋಗ ಅಂಗೀಕಾರ ಮಾಡಿದೆ. ವಿವಿಗಳ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಮೊದಲ ವರ್ಷದ ಶೈಕ್ಷಣಿಕ ವೇಳಾಪಟ್ಟಿಯ ವಿಚಾರದಲ್ಲಿ ಯುಜಿಸಿ ಸಲ್ಲಿಸಿರುವ ಮಾರ್ಗಸೂಚಿಗಳನ್ನು ಅನುಮೋದನೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಎಪ್ರಿಲ್ 29 ರಂದು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಯುಜಿಸಿ ಪರ್ಯಾಯ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಜುಲೈ 1 ರಿಂದ 15 ರ ವರೆಗೆ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸುವಂತೆಯೂ ತಿಳಿಸಿತ್ತು. ಜುಲೈ ಅಂತ್ಯದೊಳಗೆ ಈ ಪರೀಕ್ಷಾ ಫಲಿತಾಂಶ ಪ್ರಕಟ ಮಾಡುವಂತೆಯೂ ಸೂಚಿಸಿತ್ತು. ಇದರ ಜೊತೆಗೆ ಪ್ರವೇಶ ರದ್ದತಿಯಾದ ಸಂಭವಗಳು ಘಟಿಸಿದರೆ ಶುಲ್ಕ ಮರುಪಾವತಿಗೂ ಕ್ರಮ ಕೈಗೊಳ್ಳಲಾಗುವುದಾಗಿ ಶಿಕ್ಷಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೋನಾ ಸಂಕಷ್ಟದ ಅವಧಿಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದು, ಈ ಹಿನ್ನೆಲೆಯಲ್ಲಿ ನವೆಂಬರ್ 30, 2020 ವರೆಗೆ ಪ್ರವೇಶ ಅಥವಾ ವಲಸೆ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಸಂಪೂರ್ಣ ಮರುಪಾವತಿಗೆ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.