ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಚೀನಾ ವಿರುದ್ಧ ಗುಡುಗಿದ್ದಾರೆ. ಕೊರೋನಾವೈರಸ್ಗೆ ಸಂಬಂಧಿಸಿದಂತೆ ಚೀನಾವನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ವಿಶ್ವಸಂಸ್ಥೆಗೆ ಆಗ್ರಹಿಸಿದ್ದಾರೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉನ್ನತ ಮಟ್ಟದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಚೀನಾ ಸರಕಾರವು ಕೊರೋನಾ ಮಾನವರಿಂದ ಮಾನವರಿಗೆ ಹರಡುತ್ತದೆ ಎಂಬುದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ತಪ್ಪಾಗಿ ಘೋಷಿಸಿದ್ದವು. ಬಳಿಕ, ಯಾವುದೇ ರೋಗ ಲಕ್ಷಣಗಳು ಇಲ್ಲದ ಜನರು ವೈರಸ್ ಅನ್ನು ಹರಡಲಾರರು ಎಂದು ಮತ್ತೊಂದು ಸುಳ್ಳು ಹೇಳಿದ್ದರು” ಎಂದು ಅವರು ಆರೋಪಿಸಿದ್ದಾರೆ.
ಈ ಕೃತ್ಯಗಳಿಗೆ ವಿಶ್ವಸಂಸ್ಥೆಯು ಚೀನಾವನ್ನು ಹೊಣೆಗಾರನನ್ನಾಗಿ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕೊರೋನಾವೈರಸ್ ವಿಶ್ವಕ್ಕೆ ಪಸರಿಸುವಂತೆ ಮಾಡಿದ್ದೇ ಚೀನಾ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ಈಗಾಗಲೇ ಅಮೆರಿಕವು ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧವನ್ನು ಕಡಿದುಕೊಳ್ಳಲು ಮುಂದಾಗಿದೆ. ಚೀನಾಗೆ ವಿಶ್ವ ಆರೋಗ್ಯ ಸಂಸ್ಥೆ ಬೆಂಬಲವನ್ನು ನೀಡುತ್ತದೆ ಎಂಬ ಆಪಾದನೆಯನ್ನು ಅವರು ಮೊದಲಿನಿಂದಲೂ ಮಾಡುತ್ತಲೇ ಬಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.