ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮಂಗಳವಾರ ಆಯುಷ್ಮಾನ್ ಭಾರತ್-ಪ್ರಧಾನ್ ಮಂತ್ರಿ ಜನ್ ಆರೋಗ್ಯ ಯೋಜನೆ (ಎಬಿ-ಪಿಎಂಜೆಎವೈ)ಯ ಎರಡನೇ ವಾರ್ಷಿಕೋತ್ಸವವನ್ನು ಆಚರಿಸುವ ಸಲುವಾಗಿ ‘ಆರೋಗ್ಯ ಮಂಥನ’ 2.0 ಅಧ್ಯಕ್ಷತೆಯನ್ನು ವಹಿಸಿದ್ದರು.
ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ (ಪಿಎಂ-ಜಯ್) ಎಂಬುದು ದೇಶದ ಎಲ್ಲ ಜನರಿಗೆ ಆರೋಗ್ಯ ಸೇವೆಗೆ ಉಚಿತ ಪ್ರವೇಶವನ್ನು ಒದಗಿಸುವ ಕೇಂದ್ರ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಯು ತಜ್ಞರ ಚಿಕಿತ್ಸೆಯ ಅಗತ್ಯವಿರುವವರಿಗೆ ಉಚಿತ ದ್ವಿತೀಯ ಆರೋಗ್ಯ ರಕ್ಷಣೆ ಮತ್ತು ಆಸ್ಪತ್ರೆಯ ಅಗತ್ಯವಿರುವವರಿಗೆ ತೃತೀಯ ಆರೋಗ್ಯ ರಕ್ಷಣೆ ನೀಡುತ್ತದೆ.
ರಾಷ್ಟ್ರೀಯ ಆರೋಗ್ಯ ನೀತಿಯ ಭಾಗವಾಗಿ, ಈ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು 23 ಸೆಪ್ಟೆಂಬರ್ 2018 ರಂದು ಪ್ರಾರಂಭಿಸಿತು ಮತ್ತು ನಂತರ ಅದನ್ನು ನಿರ್ವಹಿಸಲು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು ಸ್ಥಾಪಿಸಲಾಯಿತು.
“ಇದು ವಿಶ್ವದ ಅತಿದೊಡ್ಡ ಸಾರ್ವಜನಿಕ-ಬೆಂಬಲಿತ ಆರೋಗ್ಯ ಖಾತ್ರಿ ಯೋಜನೆಯಾಗಿದೆ, ಇದು ಭಾರತದ ಆರ್ಥಿಕವಾಗಿ ಹಿಂದುಳಿದ ಸುಮಾರು 53 ಕೋಟಿ ಜನರಿಗೆ 5 ಲಕ್ಷ ರೂಗಳವರೆಗೆ ಆರೋಗ್ಯ ವೆಚ್ಚವನ್ನು ನೀಡುತ್ತದೆ” ಎಂದಿದ್ದಾರೆ.
ಯೋಜನೆ ಇಲ್ಲಿಯವರೆಗೆ 15,500 ಕೋಟಿ ರೂ.ಗಳಿಗಿಂತ ಹೆಚ್ಚಿನ ಮೌಲ್ಯದ ಚಿಕಿತ್ಸೆಯನ್ನು ಒದಗಿಸಿದೆ, ಕೋಟಿಗಟ್ಟಲೆ ಜೀವಗಳನ್ನು ಉಳಿಸಿದೆ ಮತ್ತು ಆರೋಗ್ಯಕ್ಕಾಗಿ ಹಣ ವ್ಯಯಿಸಿ ಕುಟುಂಬಗಳು ಬಡತನದತ್ತ ಸಾಗುವುದನ್ನು ತಡೆದಿದೆ.
ಈ ಎರಡು ವರ್ಷಗಳಲ್ಲಿ ಈ ಯೋಜನೆಯು 1.26 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಉಚಿತ ಚಿಕಿತ್ಸೆ ನೀಡಿದೆ ಎಂದು ಸಚಿವರು ಹೇಳಿದ್ದಾರೆ. ಈವರೆಗೆ 23,000 ಕ್ಕೂ ಹೆಚ್ಚು ಆಸ್ಪತ್ರೆಗಳು ಇದಕ್ಕೆ ಸೇರಿವೆ ಮತ್ತು 12.5 ಕೋಟಿಗೂ ಹೆಚ್ಚು ಇ-ಕಾರ್ಡ್ಗಳನ್ನು ನೀಡಲಾಗಿದೆ. ಕ್ಯಾನ್ಸರ್, ಹೃದಯ ಕಾಯಿಲೆಗಳು, ಮೂಳೆಚಿಕಿತ್ಸೆಯ ತೊಂದರೆಗಳಿಗೆ ಇದಡಿ ಚಿಕಿತ್ಸೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.