ನವದೆಹಲಿ: ವಿದೇಶಗಳಿಂದ ದೇಣಿಗೆ ಸ್ವೀಕರಿಸುವ ಸರ್ಕಾರೇತರ ಸಂಸ್ಥೆಯ ಪದಾಧಿಕಾರಿಗಳು ನೋಂದಣಿ ಮಾಡಿಕೊಳ್ಳುವ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ನೀಡುವುದನ್ನು ಕಡ್ಡಾಯಗೊಳಿಸಲು ವಿದೇಶಿ ದೇಣಿಗೆ (ನಿಯಂತ್ರಣ) ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿತು.
ವಿರೋಧ ಪಕ್ಷಗಳು ಎಂಟು ಸದಸ್ಯರ ಅಮಾನತು ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಈ ನಡುವೆಯೇ ಈ ಮಸೂದೆಯು ಅವಿರೋಧವಾಗಿ ಅಂಗೀಕಾರಗೊಂಡಿತು. ಈ ಮಸೂದೆ ಯಾವುದೇ ಸ್ವಯಂ ಸೇವಾ ಸಂಸ್ಥೆಯ ವಿರುದ್ಧವಲ್ಲ. ಇದೊಂದು ಪಾರದರ್ಶಕ ವ್ಯವಸ್ಥೆ ರೂಪಿಸಲು ಕೈಗೊಂಡ ಕ್ರಮವಾಗಿದೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರಾಯ್ ಅವರು ಮಾಹಿತಿ ನೀಡಿದರು.
ಈ ಮಸೂದೆಯಲ್ಲಿ ತಿಳಿಸಿದಂತೆ ಸ್ವಯಂಸೇವಾ ಸಂಸ್ಥೆಗಳು ತಮ್ಮ ವಾರ್ಷಿಕ ಆಡಳಿತ ವೆಚ್ಚವನ್ನು 50% ದಿಂದ 20% ಗೆ ಇಳಿಸಬೇಕಾಗಿದೆ. ಹೀಗಾದಲ್ಲಿ ಮೂಲ ಉದ್ದೇಶಗಳಿಗೆ ಹೆಚ್ಚಿನ ಹಣ ಬಳಕೆಯಾಗುವಂತಾಗುತ್ತದೆ. ದೇಶದಲ್ಲಿ ಅದೆಷ್ಟೋ ಸಂಸ್ಥೆಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಸೇವಾ ಸಂಸ್ಥೆಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಈ ಮಸೂದೆ ತರಲಾಗಿದೆ. ಇದೀಗ ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲೂ ಅನುಮೋದನೆ ಪಡೆದುಕೊಂಡಿದ್ದು, ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಲಾಗುವುದಾಗಿ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.