ವಿಶ್ವಸಂಸ್ಥೆ: ದೇಶದ ಆಂತರಿಕ ವಿಚಾರಕ್ಕೆ ಮೂಗು ತೂರಿಸುವುದು ಸರಿಯಾದ ಕ್ರಮವಲ್ಲ ಎಂದು ಭಾರತ ಟರ್ಕಿ ದೇಶಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ.
ಟರ್ಕಿ ಅಧ್ಯಕ್ಷ ರಿಸೆಪ್ ತಯಿಪ್ ಎರ್ಡೋಗನ್ ಅವರು ಜಮ್ಮು- ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇದು ಸ್ವೀಕಾರಾರ್ಹ ಕ್ರಮವಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಅವರ ಈ ಹೇಳಿಕೆಗೆ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯ 75 ನೇ ಸಾಮಾನ್ಯ ಅಧಿವೇಶನದಲ್ಲಿ ಅವರು ಈ ಹೇಳಿಕೆ ನೀಡಿದ್ದರು.
ವಿಶೇಷ ಸ್ಥಾನಮಾನ ರದ್ಧತಿ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಲ್ಲಿ ಸಮಸ್ಯೆ ಸೃಷ್ಟಿಸಿದೆ ಎಂದು ಎರ್ಡೋಗನ್ ಹೇಳಿದ್ದರು.
ಇವರ ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ. ಎಸ್. ತಿರುಮೂರ್ತಿ, ಟರ್ಕಿ ಅಧ್ಯಕ್ಷರು ಭಾರತದ ಆಂತರಿಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕ್ರಮ ಸರಿಯಲ್ಲ. ಅವರು ಇತರ ರಾಷ್ಟ್ರಗಳ ಸಾರ್ವಭೌಮತೆಗೆ ಗೌರವ ನೀಡುವುದನ್ನು ಕಲಿಯಬೇಕು. ಅವರು ಇಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಅಧ್ಯಯನ ನಡೆಸಿ ಹೇಳಿಕೆ ನೀಡಬೇಕು ಎಂದು ತಿಳಿಸಿದರು.
ಕಳೆದ ಬಾರಿಯೂ ವಿಶ್ವಸಂಸ್ಥೆಯ ಭಾಷಣದಲ್ಲಿ ಟರ್ಕಿ ಪಾಕಿಸ್ಥಾನದ ಪರ ತನ್ನ ನಿಲುವನ್ನು ಪ್ರಕಟಿಸಿತ್ತು. ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಇತರ ರಾಷ್ಟ್ರಗಳ ಹಸ್ತಕ್ಷೇಪವನ್ನು ಭಾರತ ಬಯಸುವುದಿಲ್ಲ. ಭಾರತ ಇದನ್ನು ಆಂತರಿಕವಾಗಿಯೇ ಬಗೆ ಹರಿಸಿಕೊಳ್ಳುತ್ತದೆ ಎಂದು ತಿರುಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.