ವಿಶ್ವಸಂಸ್ಥೆ: ಸಾಮಾಜಿಕ ಪಿಡುಗು ಎಂದೇ ಬಿಂಬಿತವಾಗಿರುವ ಬಾಲ್ಯ ವಿವಾಹ ಮತ್ತು ಬಲವಂತದ ವಿವಾಹಗಳಂತಹ ಪ್ರಕರಣಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೋ ಗುಟೆರಸ್ ವರದಿಯೊಂದನ್ನು ಸಿದ್ಧಪಡಿಸಿದ್ದಾರೆ.
ಈ ವರದಿಯಲ್ಲಿ ಬಾಲ್ಯ ವಿವಾಹ, ಬಲವಂತದ ವಿವಾಹಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತವೂ ಸೇರಿದಂತೆ ಇನ್ನಿತರ ರಾಷ್ಟ್ರಗಳು ಜಾರಿಗೊಳಿಸಿರುವ ಕ್ರಮಗಳ ಬಗೆಗೂ ಅವರು ಉಲ್ಲೇಖಿಸಿದ್ದಾರೆ. ಇದರಲ್ಲಿ ಜೂನ್ 2018 ರಿಂದ ತೊಡಗಿದಂತೆ 2020 ರ ಅವಧಿಯಲ್ಲಿ ವಿಶ್ವದ ಬೇರೆ ಬೇರೆ ರಾಷ್ಟ್ರಗಳು ತೆಗೆದುಕೊಂಡಿರುವ ಮಹತ್ವದ ನಿರ್ಧಾರಗಳ ಬಗೆಗೂ ಬೆಳಕು ಹರಿಸಲಾಗಿದೆ.
ಬಲವಂತದ ವಿವಾಹ ಅಥವಾ ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಕನಿಷ್ಠ ಮಿತಿಯನ್ನು ಹೆಚ್ಚಳ ಮಾಡುವ ಬಗೆಗೂ ಈ ವರದಿಯಲ್ಲಿ ಗುಟೆರಸ್ ಗಮನ ಹರಿಸಿದ್ದಾರೆ. ಜೊತೆಗೆ ಇಂತಹ ಪಿಡುಗುಗಳನ್ನು ತಡೆಯುವ ನಿಟ್ಟಿನಲ್ಲಿ ಹಲವು ರಾಷ್ಟ್ರಗಳು ಸಾಧಿಸುತ್ತಿರುವ ಪ್ರಗತಿಯ ಕುರಿತಾಗಿಯೂ ಈ ವರದಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.