ಬೆಂಗಳೂರು: ಈ ಬಾರಿಯ ಗ್ರಾಮ ಪಂಚಾಯತ್ ಚುನಾವಣೆಯನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ನಡೆಸುವುದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ಗ್ರಾ. ಪಂ. ಗಳ ಅಧಿಕಾರದ ಅವಧಿ ಈ ಬಾರಿಯ ಮೆ, ಜೂನ್ ತಿಂಗಳುಗಳಲ್ಲಿಯೇ ಕೊನೆಗೊಂಡಿದ್ದರೂ, ಕೊರೋನಾ ಸಾಂಕ್ರಾಮಿಕ ರೋಗ ಹಬ್ಬಿದ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಅಸಾಧ್ಯವಾಗಿತ್ತು. ಆ ಸಂದರ್ಭದಲ್ಲಿ ಮುಂದೂಡಲ್ಪಟ್ಟ ಚುನಾವಣೆಯನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸುವ ಸಲುವಾಗಿ ಚುನಾವಣಾ ಆಯೋಗ ತಯಾರಿ ನಡೆಸುತ್ತಿದೆ ಎಂದು ತಿಳಿದು ಬಂದಿದೆ.
ರಾಜ್ಯದ 5800 ಗ್ರಾಮ ಪಂಚಾಯತ್ಗಳಿಗೆ ಸಂಬಂಧಿಸಿದಂತೆ ಈ ಚುನಾವಣೆ ನಡೆಯಲಿದೆ. ಈ ಸಂಬಂಧ ಪೂಕರ ಸಿದ್ಧತೆಗಳನ್ನು ನಡೆಸುವಂತೆಯೂ ರಾಜ್ಯ ಪೊಲೀಸ್ ಇಲಾಖೆಗೆ ಆಯೋಗ ಪತ್ರದ ಮೂಲಕ ಮನವಿ ಮಾಡಿದೆ. ಜೊತೆಗೆ ಚುನಾವಣಾ ಸಂದರ್ಭದಲ್ಲಿ ಸೂಕ್ತ ಭದ್ರತೆ, ಕಾನೂನು ವ್ಯವಸ್ಥೆ ಪಾಲನೆಗೂ ಕ್ಲಮ ಕೈಗೊಳ್ಳುವಂತೆ ಸೂಚಿಸಿದೆ. ಅದರಂತೆ ಚುನಾವಣಾ ಖರ್ಚು ವೆಚ್ಚಕ್ಕೆ ಅನುದಾನ ನೀಡಲು ಸರ್ಕಾರಕ್ಕೆ ಮನವಿ ಸಲ್ಲಿಸಿರುವುದಾಗಿಯೂ ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.